ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ ನಾಮಪತ್ರ ಸಲ್ಲಿಕೆ.
ಚಾಮರಾಜನಗರ:ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ, ಜೆಡಿಎಸ್ ನಾಯಕರು ನಗರದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು.
ನಗರದ ಭುವನೇಶ್ವರಿ ವೃತ್ತದಿಂದ ತೆರೆದ ವಾಹನದಲ್ಲಿ ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನದ ತನಕ ರೋಡ್ ಶೋ ನಡೆಸಿದರು.
ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜೆಡಿಎಸ್ ಶಾಸಕರಾದ ಜಿ.ಟಿ.ದೇ ವೇಗೌಡ, ಅಭ್ಯರ್ಥಿ ಎಸ್. ಬಾಲರಾಜ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್. ನಿರಂಜನಕುಮಾರ್ ಸೇರಿದಂತೆ ಇತರೆ ಹಲವು ನಾಯಕರು ಭಾಗವಹಿಸಿದ್ದರು.
ಬಳಿಕ ಅಭ್ಯರ್ಥಿ ಎಸ್.ಬಾಲರಾಜ್ ಅವರು ಚುನಾವಣಾಧಿಕಾರಿ ಶಿಲ್ಪಾನಾಗ್ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು. ಇವರಿಗೆ ಬಿ.ವೈ.ವಿಜಯೇಂದ್ರ, ಎನ್ ಮಹೇಶ್,ಜಿ.ಟಿ.ದೇವೇಗೌಡ, ಅಶ್ವಿನ್ ಕುಮಾರ್ ರಾಮ್ ದಾಸ್, ಪುಟ್ಟಸ್ವಾಮಿ ಸಾಥ್ ನೀಡಿದರು.
ರೋಡ್ ಶೋನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ದುಡ್ಡಿನ ಅಹಂಕಾರ ಹಾಗೂ ಅಧಿಕಾರದ ಅಮಲಿನಿಂದ ತೇಲುತ್ತಿದೆ. ಹಣ, ಹೆಂಡದ ಮೂಲಕ ಚುನಾವಣೆ ಗೆಲ್ಲಲು ಮುಂದಾಗಿದೆ. ಇದಕ್ಕೆ ಮತದಾರರು ಅವಕಾಶ ಕೊಡಬಾರದು. ಬಾಲರಾಜ್ ಗೆಲುವಿನ ಮೂಲಕ ನರೇಂದ್ರಮೋದಿ ಅವರ ಕೈ ಬಲಪಡಿಸಬೇಕಿದೆ.
ಬಿಜೆಪಿ, ಜೆಡಿಎಸ್ ಪಕ್ಷ ಒಂದಾಗಿ ರಾಜ್ಯಾದ್ಯಂತ ಪ್ರವಾಸ ಹೊರಟಿದ್ದೇವೇ,ಕಾಂಗ್ರೆಸ್ ಪಕ್ಷದವರ ಬ್ಯಾಟರಿ ಡೌನ್ ಆಗಿದೆ ಎಂದು ಲೇವಡಿ ಮಾಡಿದರು. ಅಂಬೇಡ್ಕರ್ ಅಂತ್ಯಸಂಸ್ಕಾರಕ್ಕೂ ಕೂಡ ಕಾಂಗ್ರೆಸ್ ಪಕ್ಷ ಅವಕಾಶ ಮಾಡಿಕೊಡಲಿಲ್ಲ. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದವರು ಸೋಲಿಸಿದರು. ಸಂವಿಧಾನ, ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ಗೆ ಉಳಿದಿಲ್ಲ. ನರೇಂದ್ರಮೋದಿ ಅವರು ಅಂಬೇಡ್ಕರ್ ಅವರ ಮನೆ ಅಭಿವೃದ್ಧಿಪಡಿಸಿ ಪಂಚತೀರ್ಥಗಳನ್ನಾಗಿ ಪರಿವರ್ತನೆ ಮಾಡಿದ್ದಾರೆ ಎಂದರು ಈ ಸಂದರ್ಭದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು
ವರದಿ ಆರ್ ಉಮೇಶ್ ಮಲಾರಪಾಳ್ಯ