ಮೇ 19ಕ್ಕೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯ 6ನೇ ತರಗತಿ ಪ್ರವೇಶ ಪರೀಕ್ಷೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ, : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ದೇವನಾಯಕನಹಳ್ಳಿ ದೇವನಹಳ್ಳಿ ತಾಲ್ಲೂಕು ಹಾಗೂ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು ಈ ಶಾಲೆಗಳಿಗೆ ಆನ್ ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಿರುವ ವಿದ್ಯಾರ್ಥಿಗಳಿಗೆ 2024-25ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿಯ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯು ಮೇ 19 ರಂದು ನಡೆಯಲಿದೆ.
ಪರೀಕ್ಷೆಯು ದೇವನಹಳ್ಳಿ ತಾಲ್ಲೂಕಿನ ಮೌಲನಾ ಆಜಾದ್ ಮಾದರಿ ಶಾಲೆ, ವಿಜಯಪುರ ಇಲ್ಲಿ ನಡೆಯಲಿದ್ದು, ಪರೀಕ್ಷಾರ್ಥಿಗಳು ಪ್ರವೇಶ ಪತ್ರಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಹೊಸಕೋಟೆ,
ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರಗಳಲ್ಲಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಜಿಲ್ಲಾ ಕಛೇರಿ, ಜಿಲ್ಲಾ ಮಾಹಿತಿ/ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವುದು.
ಜಿಲ್ಲಾ ಕಛೇರಿ, ದೇವನಹಳ್ಳಿ ದೂ.ಸಂಖ್ಯೆ: 080-29787455. ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ
ದೂ.ಸಂಖ್ಯೆ:9986874875. ನೆಲಮಂಗಲ ತಾಲ್ಲೂಕು ಮಾಹಿತಿ ಕೇಂದ್ರ
ದೂ.ಸಂಖ್ಯೆ:8660197516
ದೇವನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ ದೂ.ಸಂಖ್ಯೆ:8861926851
ಹೊಸಕೋಟೆ ತಾಲ್ಲೂಕು ಮಾಹಿತಿ ಕೇಂದ್ರ ದೂ.ಸಂಖ್ಯೆ:7676905779.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ 8277799990 ಸಂಖ್ಯೆಗೆ ಸಂಪರ್ಕಿಸಬಹುದು ಎಂದು
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.