ಸಿದ್ದು ನೇತೃತ್ವದ ಕಾಂಗ್ರೆಸ್ ಆಡಳಿತದಿಂದ ರಾಜ್ಯ ದಿವಾಳಿ… ರಾಮಕೃಷ್ಣಯ್ಯ
ದೊಡ್ಡಬಳ್ಳಾಪುರ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದಿಂದ ರಾಜ್ಯ ದಿವಾಳಿಯತ್ತ ಸಾಗುತ್ತಿದೆ. ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಎಸ್. ಸಿ, ಎಸ್ ಟಿ ಗಳ ಅಭಿವೃದ್ಧಿ ಗೆ ಮೀಸಲಿಟ್ಟಿದ್ದ ಹಣವನ್ನು ಈಗಿನ ಕಾಂಗ್ರೆಸ್ ಸರ್ಕಾರ ಬಿಟ್ಟಿ ಭಾಗ್ಯ ಯೋಜನೆಗಳಿಗೆ ಬಳಸಿ ದಲಿತ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದೆ. ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಕೃಷ್ಣ ಯ್ಯ ಆರೋಪಿಸಿದ್ದಾರೆ.
ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ರಾಮಕೃಷ್ಣ ಯ್ಯ ಮಾತನಾಡಿ ಸಿದ್ದು ಡಿ ಕೆ ಶಿ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ತೆರಿಗೆ ಹಣವನ್ನು ಅಲ್ಪಸಂಖ್ಯಾತರ ಅಭಿವೃದ್ಧಿ ನೆಪದಲ್ಲಿ ಮುಸಲ್ಮಾನರ ತುಷ್ಟೀಕರಣಕ್ಕೆ ಮುಂದಾಗಿದೆ. ಬಿಟ್ಟಿ ಭಾಗ್ಯ ಯೋಜನೆಗಳ ನೆಪದಲ್ಲಿ ರಾಜ್ಯವನ್ನು ಲೂಟಿ ಮಾಡುತ್ತಿದೆ. ಗಂಗಾಜಲ ಯೋಜನೆಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ರಾಜ್ಯ ಸರ್ಕಾರದಲ್ಲಿ ಹಣವಿಲ್ಲದೆ ಅಭಿವೃದ್ಧಿ ಕಾರ್ಯಗಳು ಕುಂಟಿತ ಗೊಂಡಿವೆ. ಹಿಂದಿನ ಬಿಜೆಪಿ ಸರ್ಕಾರ ರೂಪಿಸಿದ್ದ ಹಲವಾರು ಜನಪರ ಯೋಜನೆಗಳನ್ನು ಸಂಪೂರ್ಣವಾಗಿ ತಡೆಹಿಡಿದು ಎಲ್ಲವನ್ನು ಬಿಟ್ಟಿ ಭಾಗ್ಯ ಯೋಜನೆಗಳಿಗೆ ಬಳಸಿಕೊಂಡು ರಾಜ್ಯವನ್ನು ಅದೋಗತಿಗೆ ತಳ್ಳುತ್ತಿದೆ. ಇನ್ನೂ ಧಾರ್ಮಿಕ ವಿರೋಧಿ ಯಾಗಿರುವ ಸಿದ್ದು ಸರ್ಕಾರ ಜೈಶ್ರೀರಾಮ್ ಎಂದ ಹಿಂದೂಗಳ ಮೇಲೆ ಹಲ್ಲೆ ಮಾಡಿದ ಅಲ್ಪಸಂಖ್ಯಾತ ಕಿಡಿಗೇಡಿಗಳ ರಕ್ಷಣೆ ನೀಡುತ್ತಿದೆ. ಮೊನ್ನೆ ನಡೆದ ನೇಹಾ ಹತ್ಯೆ ಪ್ರಕರಣದಲ್ಲಿ ಅಲ್ಪಸಂಖ್ಯಾತರ ಪರ ನಿಂತು ಹಿಂದೂ ವಿರೋಧಿ ಸರ್ಕಾರವಾಗಿದೆ. ಸಿದ್ದರಾಮಯ್ಯ ತನ್ನ ಆಡಳಿತ ವೈಫಲ್ಯವನ್ನು ಮುಚ್ಚಿಕೊಳ್ಳಲು ಜನಪ್ರಿಯ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಎಂದ ರಾಮಕೃಷ್ಣಯ್ಯ ಪ್ರಸ್ತುತನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೇಳಿಕೊಳ್ಳಲು ಯಾವುದೇ ವಿಚಾರಗಳಿಲ್ಲದೆ ರಾಜ್ಯದ ಜನ ಚೀಮಾರಿ ಹಾಕುತ್ತಾರೆಂದು ಪೆನ್ಡ್ರೈವ್ ಪ್ರಕಾರಣವನ್ನು ಹುಟ್ಟುಹಾಕಿ ರಾಜ್ಯದ ಜನರನ್ನು ದಿಕ್ಕು ತಪ್ಪಿಸಿ ಮತ ಯಾಚನೆ ಮಾಡುತ್ತಿದ್ದಾರೆ. ಪೆನ್ ಡ್ರೈವ್ ಪ್ರಕರಣದ ರೂವಾರಿಗಳು ಕಾಂಗ್ರೆಸ್ ನವರೇ ಆಗಿದ್ದು ರಾಜ್ಯದ ಹೆಣ್ಣು ಮಕ್ಕಳ ಗೌರವವನ್ನು ಹಾಳು ಮಾಡುತ್ತಿದ್ದಾರೆ. ಒಂದೆಡೆ ಅಭಿವೃದ್ಧಿ ವೈಫಲ್ಯ, ಹಿಂದೂ ವಿರೋಧಿ ನೀತಿ, ರೈತ ವಿರೋಧಿ, ದಲಿತ ವಿರೋಧಿ ಜೊತೆಗೆ ಮಹಿಳಾ ವಿರೋಧಿಯಾಗಿರುವ ಸಿದ್ದರಾಮಯ್ಯ ಸರ್ಕಾರ ಈ ಕೂಡಲೇ ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಬಿಜೆಪಿ ಪಕ್ಷದ ವತಿಯಿಂದ ರಾಜ್ಯದಲ್ಲಿ ಉಗ್ರ ಹೋರಾಟವನ್ನು ನಡೆಸಬೇಕಾದೀತೆಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ದೊಡ್ಡಬಳ್ಳಾಪುರ ತಾಲೂಕು ಬಿಜೆಪಿ ಅಧ್ಯಕ್ಷ ನಾಗೇಶ್, ನಗರ ಅಧ್ಯಕ್ಷ ಮುದ್ದಪ್ಪ, ಜಿಲ್ಲಾ ಪ್ರಧಾನಕಾರ್ಯದರ್ಶಿ ಗೋಪಿ, ಮಾಜಿ ನಗರಸಭಾ ಸದಸ್ಯ ವೆಂಕಟ ರಾಜು, ಮುಖಂಡ ಮಂಜುನಾಥ್ ಸೇರಿದಂತೆ ಜಿಲ್ಲೆಯ ಪ್ರಮುಖರು ಪತ್ರಿಕಾ ಗೋಷ್ಠಿಯಲ್ಲಿ ಭಾಗವಹಿಸಿದ್ದರು.