**ಯಳಂದೂರು ತಾಲ್ಲೂಕಿನ ವಿವಿಧ ಶಾಲೆಗಳಿಗೆ ಬೇಸಿಗೆ ರಜೆ ಮುಗಿಸಿ ಆಗಮಿಸಿದ ವಿದ್ಯರ್ಥಿಗಳು..**

ಯಳಂದೂರು.ಬೇಸಿಗೆ ರಜೆ ಮುಗಿದಿದ್ದು, ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಶುರುವಾಗಿವೆ.ಬುಧವಾರದಿಂದ 2024-2025ನೇ ಸಾಲಿನ ಶೈಕ್ಷಣಿಕ ಅವಧಿ ಆರಂಭವಾಗಿದೆ.

ಕಳೆದ 2 ತಿಂಗಳಿಂದ ಬೇಸಿಗೆ ರಜೆಯಿಂದ ಬಂದ್ ಆಗಿದ್ದ ಶಾಲೆಗಳು ಇಂದಿನಿಂದ ಓಪನ್ ಆಗಿವೆ,ಹಲವು ಖಾಸಗಿ ಶಾಲೆಗಳು ಈಗಾಗಲೇ ತರಗತಿಗಳನ್ನು ಆರಂಭಿಸಿದ್ದು,ಇಂದು ಸರ್ಕಾರಿ ಶಾಲೆಗಳು ಅಧಿಕೃತವಾಗಿ ಪುನರಾರಂಭಗೊಂಡಿದೆ.ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮಜಾ ಮುಗಿಸಿಕೊಂಡು ವಾಪಸ್ ಆಗಿರುವ ಚಿಣ್ಣರಿಗೆ, ಶಾಲಾ ಪ್ರಾರಂಭೋತ್ಸವದ ಮೂಲಕ ಹೂ ಗುಚ್ಚ ಹಾಗೂ ಸಿಹಿ ನೀಡಿ ಶಿಕ್ಷಕರು ಬರಮಾಡಿಕೊಂಡಿದ್ದಾರೆ.

ಈ ಬಗ್ಗೆ ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲರಾದ ನಂಜುಂಡಯ್ಯ ರವರು ಮಾತನಾಡಿ
ಶಾಲೆಗಳಲ್ಲಿ ಪ್ರತಿಯೊಂದು ತರಗತಿ ಕೊಠಡಿ, ಹೊರಾಂಗಣ, ಬಿಸಿಯೂಟ ಕೊಠಡಿ, ಆಟದ ಮೈದಾನ, ಕಾಂಪೌಂಡ್ ಸೇರಿದಂತೆ ಶಾಲೆಯನ್ನು ಉತ್ತಮ ರೀತಿಯಲ್ಲಿ ಸ್ವಚ್ಛಗೊಳಿಸಲಾಗಿದೆ,
ಮಕ್ಕಳು ಶಾಲೆಗೆ ಬರುತ್ತಿದ್ದಂತೆ ಅವರಿಗೆ ಹೂವು, ಚಾಕೊಲೇಟ್ ನೀಡಿ ಸ್ವಾಗತ ನೀಡಲಾಗಿಯಿತು.
ಈಗಾಗಲೇ ಮಕ್ಕಳಿಗೆ ಸಮವಸ್ತ್ರ ಪೂರ್ಣ ಪ್ರಮಾಣದಲ್ಲಿ ಶಾಲೆಗೆ ರವಾನೆಯಾಗಿದ್ದು, ಪಠ್ಯಪುಸ್ತಕಗಳನ್ನು ಕೂಡ ಸರಬರಾಜು ಮಾಡಲಾಗಿದೆ ಎಂದು ತಿಳಿಸಿದರು

ವರದಿ ಆರ್ ಉಮೇಶ್ ಮಲಾರಪಾಳ್ಯ