ಸಾಸಲು ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಸ್ಪರ್ಧೆ

ದೊಡ್ಡಬಳ್ಳಾಪುರ : ತಾಲ್ಲೂಕಿನ ಸಾಸಲು ಹೋಬಳಿಯ ಪುಟ್ಟಲಿಂಗಯ್ಯನ ಪಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾಸಲು ಕ್ಲಸ್ಟರ್ ಹಂತದ ಪ್ರತಿಭಾಕಾರಂಜಿ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು.ಕ್ಷೇತ್ರ ಶಿಕ್ಷಣಾಧಿಕಾರಿ ಸೈಯಿದಾ ಅನೀಸ್ ದೀಪಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಮಕ್ಕಳ ಪ್ರತಿಭೆಗಳನ್ನು ಅನಾವರಣ ಮಾಡುವ ವೇದಿಕೆಯಾಗಿದ್ದು, ಸಾಸಲು ಹೋಬಳಿಯ ಪುಟ್ಟಲಿಂಗಯ್ಯನ ಪಾಳ್ಯದಲ್ಲಿ ನೆಡೆಯುತ್ತಿರುವುದು ಸಂತಸ ತಂದಿದೆ. ಮಕ್ಕಳಲ್ಲಿ ಕ್ರೀಡೆ, ಕಲೆ, ಸಾಹಿತ್ಯ ಗಳಲ್ಲಿ ಅಭಿವೃದ್ದಿ ಹೊಂದಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಗಾಯನ, ನೃತ್ಯ , ಏಕಪಾತ್ರಾಭಿನಯ, ನಾಟಕ, ಚರ್ಚಾ ಸ್ಪರ್ಧೆ, ಜಾನಪದ ನೃತ್ಯ, ಭಾವಗೀತೆ, ,ಪ್ರಬಂಧ ಸ್ಪರ್ಧೆ, ಸೇರಿದಂತೆ ಹಲವು ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಗಳ ಪ್ರದರ್ಶನ ಮಾಡಿದರು.

ಸ್ಪರ್ಧೆಗಳಲ್ಲಿ ಭಾಗವಹಿಸಿ ಗೆಲುವು ಸಾಧಿಸಿದ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಎಂ ರವಿಕುಮಾರ್, ಪ್ರತಿಭಾಕಾರಂಜಿಯ ಅಧ್ಯಕ್ಷರಾದ ರಾಮಚಂದ್ರಯ್ಯ ವಿ,ಇ ಸಿ ಒಗಳಾದ ಭೀಮರಾಜ್ ಮತ್ತು ಜಯಶ್ರೀ ಕೆ.ಜೆ, ಎಸ್ ಡಿ ಎಂ ಸಿ ಅಧ್ಯಕ್ಷರಾದ ದೇವರಾಜ್ , ದೊಡ್ಡಬಳ್ಳಾಪುರ ಶಿಕ್ಷಕರ ಸಂಘದ ಪದಾಧಿಕಾರಿಗಳು, ಮತ್ತು ಪುಟ್ಟಲಿಂಗಯ್ಯನಪಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು,ಸಾಸಲು ಕ್ಲಸ್ಟರ್ ಹಂತದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.