ಕಾರ್ಮಿಕ ಇಲಾಖೆಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಒಂದು ದಿನದ ಕಾರ್ಯಗಾರ

ಯಳಂದೂರು: ಪಟ್ಟಣದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ‌ಬುಧವಾರ ತಾಲ್ಲೂಕು ಆಡಳಿತ, ಜಿಲ್ಲಾ ಕಾನೂನು ಸೇವಗಳ‌ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಭದ್ರತಾ ಮಂಡಳಿ ಇವರ ಸಹಯೋಗದೊಂದಿಗೆ ಸಾರ್ವಜನಿಕರಿಗೆ, ಉದ್ಯೋಗದಾತರಿಗೆ, ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಿಗೆ ಹಾಗೂ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಕಾರ್ಮಿಕ ಕಾಯಿದೆಗಳು/ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಒಂದು ದಿನದ ತಾಲ್ಲೂಕು ಮಟ್ಟದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ್ ರವರು ಉದ್ಘಾಟಿಸಿ ಬಳಿಕ ಮಾತನಾಡಿದರು.
ಕಾರ್ಮಿಕರ ಯೋಗಕ್ಷೇಮ ಮತ್ತು ಕಾರ್ಮಿಕರಿಗೆ ಸರಕಾರದಿಂದ ದೊರೆಯುವ ಸವಲತ್ತುಗಳ ಬಗ್ಗೆ ಪ್ರತಿಯೊಬ್ಬ ಕಾರ್ಮಿಕನಿಗೆ ತಿಳಿಸಬೇಕಾಗಿದೆ. ಕಾರ್ಮಿಕರ ಮೇಲೆ ಯಾವುದೇ ತಾರತಮ್ಯ ನಡೆಯ ಬಾರದು.

ಸಂವಿಧಾನದ 14 ನೇ ವಿಧಿಯ ಪ್ರಕಾರ ಕಾನೂನಿನ ಮುಂದೆ ಎಲ್ಲರೂ ಸಮಾನರು ಕಾರ್ಮಿಕರು ಮತ್ತು ಮಾಲೀಕರ ನಡುವೆ ಉತ್ತಮ ಬಾಂಧವ್ಯವಿರಬೇಕು. ಕಾರ್ಮಿಕರಿಗೆ ಕಾನೂನಿನ ಅರಿವು ಮತ್ತು ಕಾರ್ಮಿಕ ಹಕ್ಕುಗಳ ಬಗ್ಗೆ ಕಾರ್ಮಿಕರು ತಿಳಿದುಕೊಳ್ಳಬೇಕು.

ಕನಿಷ್ಠ ಕೂಲಿ ಬಗ್ಗೆ ಕಾರ್ಮಿಕರು ತಿಳಿದುಕೊಳ್ಳಬೇಕು ಮಾಲೀಕರು ದಿಢೀರನೆ ಕಾರ್ಮಿಕನನ್ನು ಕೆಲಸದಿಂದ ತೆಗೆಯಬಾರದು. ಕಾರ್ಮಿಕರಿಗೆ ವಿರಾಮ ನೀಡಬೇಕು. ನೈಜ ಕಾರ್ಮಿಕರು ಲೇಬರ್ ಕಾರ್ಡ್ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು ಹಾಗೂ ಸರಕಾರದಿಂದ ಬರುವ ಸವಲತ್ತುಗಳನ್ನು ಪಡೆದುಕೊಳ್ಳಬೇಕು. ಕಾರ್ಮಿಕರೆಲ್ಲರೂ ಸಂಘಟಿತರಾಗಬೇಕು ಎಂದು ತಿಳಿಸಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಡಾ ಸವಿತಾ ಮಾತನಾಡಿ ಕಾರ್ಮಿಕರ ಇಲಾಖೆವತಿಯಿಂದ ಕಾರ್ಮಿಕ ಕಾಯಿದೆ, ಭದ್ರತೆ, ಸಮಾಜಿಕ ನ್ಯಾಯ ಕುರಿತು ಒಂದು ದಿನದ ಕಾರ್ಯಾಗಾರವನ್ನು ಈ ಭಾಗದ ಕಾರ್ಮಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಜಯಪ್ರಕಾಶ್, ನರೇಗಾ ಯೋಜನೆಯ ಸಹಾಯಕ ಅಧಿಕಾರಿ ರಾಧ, ಕಾರ್ಮಿಕ ನಿರೀಕ್ಷಕ ವಿ ಎಲ್ ಪ್ರಸಾದ್, ಕಟ್ಟಡ ಮಂಡಳಿಯ ರಾಜೇಶ್, ಯೋಜನಾ ನಿರ್ದೇಶಕ ಬಾಲಕಾರ್ಮಿಕ ಇಲಾಖೆ ಮಹೇಶ್ ಎಂ, ಪ್ರದೀಪ್ ಹಾಗೂ ಕಾರ್ಮಿಕರು ಹಾಜರಿದ್ದರು
ವರದಿ ಆರ್ ಉಮೇಶ್ ಮಲಾರಪಾಳ್ಯ