ಕರವೇ ತಾಲ್ಲೂಕು ಅಧ್ಯಕ್ಷರಾಗಿ ಸಂತೋಷ್, ಉಪಾಧ್ಯಕ್ಷರಾಗಿ ಸುಂದರ್,ಯುವ ಘಟಕ ಅಧ್ಯಕ್ಷರಾಗಿ ಶಿವಕುಮಾರ್ ಆಯ್ಕೆ
ಚಾಮರಾಜನಗರ: ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಚಾಮರಾಜನಗರ ತಾಲೂಕು ಅಧ್ಯಕ್ಷ ಸಂತೋಷ್, ಯುವ ಘಟಕ ಅಧ್ಯಕ್ಷರನ್ನಾಗಿ ಶಿವಕುಮಾರ್ ಅವರನ್ನು ಜಿಲ್ಲಾ ಅಧ್ಯಕ್ಷ ನವೀನ್ ಕುಮಾರ್ ಆಯ್ಕೆ ಮಾಡಿದರು. ಇದೆ ವೇಳೆ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಮಾತನಾಡಿ, ಎಲ್ಲರೂ ಸಂಘದ ಅಭಿವೃದ್ಧಿಗೆ ದುಡಿಯಬೇಕು ಪದಾಧಿಕಾರಿಗಳು ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಸಂಘವು ತಮ್ಮ ಎಂದೆಂದೂ ತಮ್ಮ ಜೊತೆಗಿರುತ್ತದೆ ಅಲ್ಲದೆ ಸಂಘಕ್ಕೆ ಯಾವುದೇ ರೀತಿಯ ಚ್ಯುತಿ ಬಾರದಂತೆ ನಡೆದುಕೊಳ್ಳುವುದು ಎಲ್ಲರ ಕರ್ತವ್ಯವಾಗಿರುತ್ತದೆ.ಸಂಘದ ವಿರೋಧ ಚಟುವಟಿಕೆಗಳನ್ನು ನಡೆಸಿದರೆ ಅವರ ಬಗ್ಗೆ ಶಿಸ್ತು ಕ್ರಮ ಜರುಗಿಸಿ ಸಂಘದಿಂದ ವಜಗೊಳಿಸಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಉಪಾಧ್ಯಕ್ಷ ಮಂಜೇಶ್,ಪ್ರಧಾನ ಕಾರ್ಯದರ್ಶಿ ಮಂಜು ಎಂ ನಾಯಕ್ ಇದ್ದರು.
ವರದಿ ಆರ್ ಉಮೇಶ್ ಮಲಾರಪಾಳ್ಯ