ಚಿಕ್ಕರಾಯಪ್ಪನಹಳ್ಳಿ ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲ್ಲೂಕು,ತೂಬಗೆರೆ ಹೋಬಳಿ ಕೆರೆಯಲ್ಲಿ ಈಜಲು ಹೋದ ಪದವಿ ಕಾಲೇಜ್ ವಿದ್ಯಾರ್ಥಿಗಳ ತಂಡ, ಅದರಲ್ಲಿ ಒರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ, ಮೃತ ಶವ ಪತ್ತೆಯಾಗದ ಹಿನ್ನಲೆ ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕು ಚಿಕ್ಕರಾಯಪ್ಪನಹಳ್ಳಿ ಕೆರೆಯಲ್ಲಿ ಇಂದು ಮಧ್ಯಾಹ್ನ ಘಟನೆ ನಡೆದಿದ್ದು, ಮೃತ ವಿದ್ಯಾರ್ಥಿಯನ್ನ ಶ್ರೀನಿವಾಸ್ (20) ಎಂದು ತಿಳಿದು ಬಂದಿದೆ, ಮೃತ ಯುವಕ ದೊಡ್ಡಬಳ್ಳಾಪುರ ತಾಲೂಕಿನ ಲಘುಮೇನಹಳ್ಳಿಯ ನಿವಾಸಿ ಯಾಗಿದ್ದು, ಕೊಂಗಾಡಿಯಪ್ಪ ಕಾಲೇಜ್ ನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ.

ಇಂದು ಮದ್ಯಾಹ್ನ ಕೊಂಗಾಡಿಯಪ್ಪ ಕಾಲೇಜ್ ವಿದ್ಯಾರ್ಥಿಗಳ ತಂಡ ಚಿಕ್ಕರಾಯಪ್ಪನಹಳ್ಳಿ ಕೆರೆಯಲ್ಲಿ ಈಜಲು ಹೋದಾಗ ದುರ್ಘಟನೆ ಸಂಭವಿಸಿದೆ, ಶ್ರೀನಿವಾಸ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಶವ ಪತ್ತೆಯಾಗದ ಹಿನ್ನಲೆ ಅಗ್ನಿಶಾಮಕ ದಳದಿಂದ ಹುಡುಕಾಟ ನಡೆಸಲಾಗುತ್ತಿದೆ.ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ