ಹಾಸ್ಟೆಲ್ ಮಕ್ಕಳ ಆರೋಗ್ಯದ ಕಡೆ ಗಮನಹರಿಸಿ– ಸಿ.ಇ.ಓ.ಮೋನಾ ರೋತ್
ಚಾಮರಾಜನಗರ : ವಿದ್ಯಾರ್ಥಿ ನಿಲಯಗಳಲ್ಲಿರುವ ಮಕ್ಕಳ ಆರೋಗ್ಯ ಮತ್ತು ಶುಚಿತ್ವದ ಕಡೆ ಹೆಚ್ಚು ಗಮನ ಹರಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಮೋನಾ ರೋತ್ ತಿಳಿಸಿದರು
ನಗರದ ದೇವರಾಜು ಅರಸು ಭವನದಲ್ಲಿ ಜಿಲ್ಲಾಡಳಿತ, ಜಿ.ಪಂ.ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವೃತ್ತಿ ನಿವ೯ಹಣೆ ಕುರಿತು ನಿಲಯ ಪಾಲಕರು,ನಿಲಯ ಮೇಲ್ವಿಚಾರಕರು ಅಡುಗೆಯವರು ಅಥವಾ ಅಡುಗೆ ಸಹಾಯಕರು ಮತ್ತು ರಾತ್ರಿ ಕಾವಲುಗಾರರಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳ ಶೈಕ್ಷಣಿಕ ಗುಣಮಟ್ಟಕ್ಕೆ ಆರೋಗ್ಯ ಮತ್ತು ಶುಚಿತ್ವ ಅವಶ್ಯಕತೆವಾಗಿದ್ದು, ಈ ನಿಟ್ಟಿನಲ್ಲಿ ನಿಲಯ ಪಾಲಕರು ಉತ್ತಮ ಗುಣಮಟ್ಟದ ಆಹಾರ ನೀಡಬೇಕು ಹಾಗೂ ನೈರ್ಮಲ್ಯದ ಕಡೆಗೆ ಹೆಚ್ಚು ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಗಾರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಿದಂಬರ, ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಶ್ವನಾಥ್, ಆಹಾರ ಸುರಕ್ಷತಾ ಜಿಲ್ಲಾ ಅಧಿಕಾರಿ ಡಾಕ್ಟರ್ ರವೀಂದ್ರ, ತಾಲೂಕು ಅಧಿಕಾರಿ ಲಿಂಗರಾಜು,ನಿವೃತ್ತ ನಿಲಯಪಾಲಕಿ ಮಂಜುಳ ಸೇರಿದಂತೆ ಜಿಲ್ಲೆಯ ವಿವಿಧ ವಿದ್ಯಾರ್ಥಿ ನಿಲಯಗಳಿಂದ ನಿಲಯ ಪಾಲಕರು ಹಾಗೂ ಅಡುಗೆ ಸಿಬ್ಬಂದಿಗಳು ಭಾಗವಹಿಸಿದ್ದರು.
ವರದಿ ಆರ್ ಉಮೇಶ್ ಮಲಾರಪಾಳ್ಯ