ಯರಗಂಬಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಸಾಮಾಜಿಕ ಲೆಕ್ಕ ಪರಿಶೋಧನೆ ಹಾಗೂ ಗ್ರಾಮ ಸಭೆ ನಡೆಯಿತು

ಯಳಂದೂರು:ತಾಲ್ಲೊಕಿನ ಯರಗಂಬಳ್ಳಿ ಗ್ರಾಮ ಪಂಚಾಯಿತಿಯಲ್ಲಿ
2023-24ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಸಾಮಾಜಿಕ ಲೇಕ್ಕ ಪರಿಶೋಧನೆ ಹಾಗೂ 15 ನೇ ಹಣಕಾಸು ಯೋಜನೆಗಳ ಗ್ರಾಮ ಸಭೆ ನಡೆಯಿತು
ಗ್ರಾ.ಪಂ ಕಚೇರಿ ಆವರಣದಲ್ಲಿ ಗ್ರಾಮ ಸಭೆಯು ಭಾಗ್ಯಮ್ಮ ರವರ ಅಧ್ಯಕ್ಷತೆಯಲ್ಲಿ ನರೇಗಾ ಯೋಜನೆಯ ಬಗ್ಗೆ ಸುದೀರ್ಘ ಚರ್ಚೆ ನಡೆಸಿ,
ವಿವಿಧ ಇಲಾಖೆಗಳಲ್ಲಿ ದೊರೆಯುವ ಸವಲತ್ತುಗಳ ಬಗ್ಗೆ
ಹಾಗೂ ರಾಜ್ಯ ಸರಕಾರದ ಕಟ್ಟುನಿಟ್ಟಿನ ಆದೇಶ ಇರುವುದರಿಂದ ನರೇಗಾ ಯೋಜನೆಯನ್ನು ಗ್ರಾಮ ಪಂಚಾಯಿತಿಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸೂಚನೆ ಬಂದಿರುವುದರಿಂದ ಸಾರ್ವಜನಿಕರು ಸಹಕಾರ ನೀಡಬೇಕೆಂದು ತಿಳಿಸಿದರು.
ನಂತರ ಲೆಕ್ಕ ತಪಾಸಣೆ ತಾಲ್ಲೂಕು ಸಂಯೋಜಕರಾದ ಪ್ರಸನ್ನ ಮಾತನಾಡಿ 2023-24 ನೇ ಸಾಲಿನಲ್ಲಿ ಗ್ರಾಮ ಪಂಚಾಯತಿ ವತಿಯಿಂದ ಹಲವು ಇಲಾಖೆಗಳಾದ ಕೃಷಿ ಇಲಾಖೆ ತೋಟಗಾರಿಕೆ ಇಲಾಖೆ ಅರಣ್ಯ ಇಲಾಖೆಗಳಲ್ಲಿ ಕಾಮಗಾರಿಗಳ ನಿರ್ವಹಣೆ ಮಾಡಲಾಗಿದೆ ಈ ಕಾಮಗಾರಿಗಳಲ್ಲಿ ಲೋಪ ದೋಷಗಳಿದ್ದರೆ ದೂರು ನೀಡಬಹುದೆಂದು ತಿಳಿಸಿ ಸಾರ್ವಜನಿಕರಿಗೆ ವರದಿ ಮಂಡಿಸಿದರು.

ಯರಗಂಬಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿರುವ ಸುತ್ತಮುತ್ತ ಗ್ರಾಮಗಳಲ್ಲಿ ಚರಂಡಿ ಹೋಳು ತೆಗೆಸಬೇಕು, ವಿದ್ಯುತ್ ದೀಪ ಅಳವಡಿಸಿ, ಮೂಲಭೂತ ಸೌಲಭ್ಯ ಕಲ್ಪಿಸಬೇಕೆಂದು ಸಾರ್ವಜನಿಕರು ಈ ಸಭೆಯಲ್ಲಿ ಒತ್ತಾಯಿಸಿದರು.
ಈ ಸಭೆಯಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಶಾಂತಮ್ಮ ಗ್ರಾಮ ಪಂಚಾಯತಿಯ ಸದಸ್ಯರಾದ ಡಿ ಸಿ ಬಾಬು .ವೈ ಎಂ ಮಹೇಶ್.ಮಹದೇವಮ್ಮ.ಜಿ ಕೆ ನಾಗರಾಜ್.ಪಿ ಡಿ ಓ ಮಂಜುನಾಥ್ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಗ್ರಾಮದ ಮುಖಂಡರು
ಸಾರ್ವಜನಿಕರು ಪಾಲ್ಗೊಂಡಿದ್ದರು.

ವರದಿ ಆರ್ ಉಮೇಶ್ ಮಲಾರಪಾಳ್ಯ