ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ

ಯಳಂದೂರು:ಪಟ್ಟಣದ ಎಸ್ ಡಿ ವಿ ಎಸ್ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ

ಜಿಲ್ಲಾ ಪಂಚಾಯತ್ ಚಾಮರಾಜನಗರ
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಯಳಂದೂರು ಇವರ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಶಾಸಕರಾದ ಎ .ಆರ್ ಕೃಷ್ಣಮೂರ್ತಿ ರವರು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳಿಗೆ ಬೋಧನೆಯ ಜೊತೆಗೆ ಇಂತಹ ಕಾರ್ಯಕ್ರಮಗಳನ್ನು ನೆಡೆಸಿ ಮಕ್ಕಳ ಪ್ರತಿಭೆಗಳನ್ನು ಹೊರತರುವ ಪ್ರಯತ್ನದಲ್ಲಿ ಶಿಕ್ಷಕರು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು
ನಂತರ ಪ್ರತಿಭಾಕಾರಂಜಿಯಲ್ಲಿ ವಿಜೇತರಾದ ಮಕ್ಕಳಿಗೆ ಮಾನ್ಯ ಶಾಸಕರು ಪ್ರಶಸ್ತಿ ಪ್ರಮಾಣ ಪತ್ರವನ್ನು ವಿತರಿಸಿದರು

ಈ ಸಂದರ್ಭಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಾಮಚಂದ್ರ ರಾಜೇ ಅರಸ್. ದುಗ್ಗಹಟ್ಟಿ ವೀರಭದ್ರಪ್ಪ. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಾರಯ್ಯ .ಉಪ ಪ್ರಾಂಶುಪಾಲರಾದ ನಂಜುಂಡಯ್ಯ .ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಹೇಶ್. ಎಲ್ಲಾ ಶಾಲೆಗಳ ಶಿಕ್ಷಕರು ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮುಖ್ಯ ಶಿಕ್ಷಕರು,ಸಹಶಿಕ್ಷಕರು,ದೈಹಿಕ ಶಿಕ್ಷಣ ಶಿಕ್ಷಕರು,ತಾಲ್ಲೂಕಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿವರ್ಗದವರು ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಎಲ್ಲಾ ಶಾಲೆಯ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು

ವರದಿ ಆರ್ ಉಮೇಶ್ ಮಲಾರಪಾಳ್ಯ