ಗೃಹಜ್ಯೋತಿ ಯೋಜನೆ ಅನುಷ್ಠಾನದಲ್ಲಿ ಸಮೇತನಹಳ್ಳಿ ಗ್ರಾಮ ಪಂಚಾಯಿತಿ ತಾಲೂಕಿಗೆ ಪ್ರಥಮ ಸ್ಥಾನ
ಸಮೇತನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚ ಗ್ಯಾರಂಟಿ ಯೋಜನೆಯ ಕುಂದುಕೊರತೆಗಳ ಸಭೆ : ಚಿಕ್ಕ ಹುಲ್ಲೂರು ಬಚ್ಚೇಗೌಡ ಹೇಳಿಕೆ
ಹೊಸಕೋಟೆ:ತಾಲೂಕಿನಲ್ಲಿ ಗೃಹಜ್ಯೋತಿ ಯೋಜನೆ ಅನುಷ್ಠಾನದಲ್ಲಿ ಸಮೇತನಹಳ್ಳಿ ಗ್ರಾಮ ಪಂಚಾಯಿತಿ ಪ್ರಥಮ ಸ್ಥಾನದಲ್ಲಿ ಇದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಚಿಕ್ಕಹುಲ್ಲೂರು ಬಚ್ಚೇಗೌಡ ಪ್ರಶಂಸೆ ವ್ಯಕ್ತಪಡಿಸಿದರು.
ತಾಲೂಕಿನ ಅನುಗೊಂಡನಹಳ್ಳಿ ಸಮೇತನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಯ ಕುಂದುಕೊರತೆಗಳ ಸಭೆ ಉದ್ಘಾಟಿಸಿ ಮಾತನಾಡಿದರು
ತಾಂತ್ರಿಕ ಸಮಸ್ಯೆ, ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಪಾವತಿದಾರರನ್ನು ಯೋಜನೆಯಿಂದ ಹೊರಗಿಡುವ ಪ್ರಕ್ರಿಯೆ ನಡೆಯುತ್ತಿರುವುದರಿಂದ ಗೃಹ ಲಕ್ಷ್ಮೀ ಯೋಜನೆಯ ಹಣ ಬಿಡುಗಡೆ 5 ತಿಂಗಳು ತಡವಾಗಿದೆ ಕೆಲವೇ ದಿನಗಳಲ್ಲಿ ಸಮಸ್ಯೆ ಬಗೆಹರಿದು ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ ಎಂದು ತಿಳಿಸಿದರು
ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಂತರಾಜು ಮಾತನಾಡಿ
ಕೊರೊನಾ ಕಾಲಘಟ್ಟ ನೋಟ್ ಬ್ಯಾನ್ ಹಾಗೂ ಬೆಲೆ ಏರಿಕೆಯಿಂದ ಜನತೆ ತತ್ತರಿಸಿ ಹೋಗಿದ್ದ ಸಮಯದಲ್ಲಿ ಕಾಂಗ್ರೆಸ್ ಸರಕಾರ ಗೃಹಲಕ್ಷ್ಮೀ, ಗೃಹ ಜ್ಯೋತಿ ಯೋಜನೆ ಜಾರಿಗೊಳಿಸಿದ ಕಾರಣ ಬಡ ಜನತೆಗೆ ಅನುಕೂಲವಾಗಿದೆ. ಆರ್ಥಿಕವಾಗಿ ಚೇತರಿಸಿಕೊಂಡಿದ್ದಾರೆ. ಗೃಹಜ್ಯೋತಿ ಯೋಜನೆ ಅನುಷ್ಠಾನದಲ್ಲಿ ನಮ್ಮ ಸಮೇತನಹಳ್ಳಿ ಗ್ರಾಮ ಪಂಚಾಯಿತಿ ಪ್ರಥಮ ಸ್ಥಾನದಲ್ಲಿ ಇದೆ. ಆದರೆ ತಾಲೂಕು ಕೇಂದ್ರದಿಂದ ದೊಡ್ಡ ಗಟ್ಟಿಗನಬ್ಬೆ , ಸಮೇತನಹಳ್ಳಿ ಮಾರ್ಗವಾಗಿ ಚಿಕ್ಕತಿರುಪತಿಗೆ ಸಾರಿಗೆ ವ್ಯವಸ್ಥೆ ಇಲ್ಲದೆ
ಇರುವುದರಿಂದ ಶಕ್ತಿ ಯೋಜನೆ ಪ್ರಗತಿಯಲ್ಲಿ ಕೊಂಚ ಹಿಂದಿದೆ. ಶೀಘ್ರವೇ ಸಮಸ್ಯೆ ಬಗೆಹರಿಸಲು ಸಂಭಂದ ಪಟ್ಟ ಇಲಾಖೆಗೆ ಪತ್ರ ಬರೆದು ಸಮಸ್ಯೆ ಬಗೆಹರಿಸಲಾಗುವುದು ಎಂದರು
ಕಾರ್ಯಕ್ರಮದಲ್ಲಿ ಗ್ಯಾರೆಂಟಿ ಯೋಜನೆಯ ತಾಲ್ಲೂಕು ಸಮಿತಿ ಸದಸ್ಯರಾದ ಅಮ್ಜದ್, ಡಿ.ಸಿ.ಲಕ್ಷ್ಮೀ, ಬ್ಯಾಟೆಗೌಡ , ಭೋಜನ ಹೊಸಹಳ್ಳಿ ಮಂಜುನಾಥ್, ಆಹಾರ ಇಲಾಖೆ ಅಧಿಕಾರಿ ಶಿವಕುಮಾರ್, ಸಾರಿಗೆ ಇಲಾಖೆ ನಟರಾಜ್, ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಸವಿತಾ,
ಬೆಸ್ಕಾಂ ಎಇ ಸಂತೋಷ್ , ಗ್ರಾಮ ಪಂಚಾಯಿತಿ ಪಿಡಿಒ ಪ್ರಸಾದ್ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಹಾಜರಿದ್ದರು





