ಕಿಡಿಗೇಡಿಗಳಿಂದ ಮರಗಳ ಮಾರಣ ಹೋಮ
ದೊಡ್ಡಬಳ್ಳಾಪುರ:ದೊಡ್ಡಬಳ್ಳಾಪುರ ನಗರದ ಹೊರವಲಯದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿದ್ದ ಮರಗಳನ್ನು ಕಿಡಿಗೇಡಿಗಳು ಕಡಿದಿದ್ದಾರೆ.
ಭಾನುವಾರ ಕಾಲೇಜಿಗೆ ರಜೆ ಇದ್ದ ಕಾರಣ, ಯಾರಿಗೂ ಗೊತ್ತಾಗದಂತೆ ಈ ಕೃತ್ಯ ಎಸಗಿದ್ದಾರೆ.ಕಾಲೇಜಿನ ಪ್ರಾಂಶುಪಾಲರ ಗಮನಕ್ಕೆ ಸಹ ತರದೆ ಖಾಸಗಿ ವ್ಯಕ್ತಿಗಳು ಮರಗಳನ್ನ ಮರಣ ಹೋಮ ಮಾಡಿರುವುದು ಸಾರ್ವಜನಿಕರ ಆಕ್ರೋಷಕ್ಕೆ ಕಾರಣವಾಗಿದೆ.
ಕಾಲೇಜಿಗೆ ಕಾಂಪೌಂಡ್ ಇಲ್ಲದೆ ಇರುವುದರಿಂದ ಇಂತಹ ಘಟನೆಗಳಿಗೆ ಕಾರಣವಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.ಈ ಕುರಿತು ಪೋಲಿಸ್ ಠಾಣೆಯಲ್ಲಿ ಸಹ ದೂರು ದಾಖಲಿಸಲಾಗಿದೆ.ಮರಗಳ ಕಡಿದಿರುವ ಕಿಡಿಗೇಡಿಗಳ ಮೇಲೆ ಸೂಕ್ತ ಕ್ರಮ ಜರುಗಿಸಲು ಸಾರ್ವಜನಿಕರು ಒತ್ತಾಯಿಸಿದ್ದಾರೆ.





