--ಜಾಹೀರಾತು--

*ಜಾಲಪ್ಪ 4ನೇ ಪುಣ್ಯಸ್ಮರಣೆ: ಸರಳ ಆಚರಣೆ*

On: December 17, 2025 7:17 PM
Follow us:
--विज्ञापन यहां--

Whatsapp Channel

Join Now

Telegram Group

Join Now
Spread the love

   *ಜಾಲಪ್ಪ 4ನೇ ಪುಣ್ಯಸ್ಮರಣೆ: ಸರಳ ಆಚರಣೆ*

*ದೊಡ್ಡಬಳ್ಳಾಪುರ* : ಮಾಜಿ ಕೇಂದ್ರ ಸಚಿವ, ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರಾದ ದಿವಂಗತ ಆರ್.ಎಲ್.ಜಾಲಪ್ಪ ಅವರ 4ನೇ ವರ್ಷದ ಪುಣ್ಯಸ್ಮರಣೆಯನ್ನು ಬುಧವಾರ ಸರಳವಾಗಿ ಆಚರಿಸಲಾಯಿತು.
ಇಲ್ಲಿನ ಆರ್‌ಎಲ್‌ಜೆಐಟಿ ಕ್ಯಾಂಪಸ್‌ನಲ್ಲಿರುವ ಆರ್.ಎಲ್.ಜಾಲಪ್ಪ ಸ್ಮೃತಿವನದಲ್ಲಿ ಜಾಲಪ್ಪ ಸಮಾಧಿಗೆ ಕುಟುಂಬಸ್ಥರು ಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಎಸ್‌ಡಿಯುಇಟಿ ಉಪಾಧ್ಯಕ್ಷ ಜೆ.ರಾಜೇಂದ್ರ, ನಾಡಿನ ರಾಜಕಾರಣ, ಶಿಕ್ಷಣ, ಸಹಕಾರ ಮತ್ತು ಸಾಮಾಜಿಕ ವಲಯದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದ ಜಾಲಪ್ಪ ಅವರು ದೂರದೃಷ್ಟಿ ಹೊಂದಿರುವ ನಾಯಕರಾಗಿದ್ದರು. ಅವರ ಚಿಂತನೆಗಳು ಮತ್ತು ಆದರ್ಶಗಳನ್ನು ಪಾಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಅವರ ಆಶಯಗಳಿಗೆ ಪೂರಕವಾಗಿ ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ವಿನೂತನ ಕಾರ್ಯಯೋಜನೆಗಳನ್ನು ಸಾಕಾರಗೊಳಿಸುತ್ತಿದೆ ಎಂದರು.
ಸಂಸ್ಥೆಯ ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ಜಾಲಪ್ಪ ಅವರ ಕುಟುಂಬಸ್ಥರು, ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ವಿವಿಧ ಶೈಕ್ಷಣಿಕ ಘಟಕಗಳ ಮುಖ್ಯಸ್ಥರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.