ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ತತ್ವಗಳನ್ನು ಪಾಲಿಸಿ: ಸಬ್ ಇನ್ಸ್ಪೆಕ್ಟರ್ ತಾಜುದ್ದೀನ್

ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ತತ್ವಗಳನ್ನ ಪಾಲಿಸಿ ಎಂದು ಸಂತೇಮರಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ತಾಜುದ್ದೀನ್ ತಿಳಿಸಿದರು.

ಚಾಮರಾಜನಗರ ತಾಲ್ಲೂಕಿನ ಮಂಗಲ ಹೊಸೂರು ಗ್ರಾಮದಲ್ಲಿ ಮಹಾ ನಾಯಕ ಡಾ.ಬಿ.ಆರ್. ಅಂಬೇಡ್ಕರ್ ಯುವಜನ ಸಂಘದಿಂದ ಏರ್ಪಡಿಸಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ಸಂವಿಧಾನವನ್ನ ರಚಿಸಿ ಎಲ್ಲರಿಗೂ ಉತ್ತಮ ಸೌಲಭ್ಯ ಕಲ್ಪಿಸಿ ಕೊಟ್ಟಿದ್ದಾರೆ. ಅದರ ಸದುಪಯೋಗವನ್ನು ಎಲ್ಲರೂ ಮಾಡಿಕೊಳ್ಳಬೇಕು. ಅಲ್ಲದೆ ಅವರಿಗೆ ಜ್ಞಾನ ಎಂಬ ಹಸಿವು ಇತ್ತು ಆ ಹಸಿವಿನಿಂದಲೇ ಇಂತಹ ದೊಡ್ಡ ಸಾಧನೆ ಮಾಡಲು ಸಾಧ್ಯವಾಯಿತು. ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ತಿಳಿಸಿದರು.

ವೇದಿಕೆ ಕಾರ್ಯಕ್ರಮದ ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಕ್ರಾಂತಿ ಸೇನೆಯ ರಾಜ್ಯಾಧ್ಯಕ್ಷ ಇರಸವಾಡಿ ಸಿದ್ದಪ್ಪಾಜಿ, ಎಸ್.ಪಿ. ಬಾಲಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾವೇದಕೆ ಜಿಲ್ಲಾಧ್ಯಕ್ಷ ಎಚ್.ಎಂ. ಶಿವಣ್ಣ ಮಂಗಲ ಹೊಸೂರು, ಮುಖಂಡರಾದ ಗುರುಮಲ್ಲಪ್ಪ, ಶಿವರಾಜ್, ನಿಂಗರಾಜ್ ಶಿವಣ್ಣ,ರಾಜಶೇಖರ್, ರಂಗಸ್ವಾಮಿ, ರಾಜು, ಸೋಮಣ್ಣ, ರಂಗಸ್ವಾಮಿ, ರಮೇಶ್, ಕಿಶೋರ್, ನಿರಂಜನ್ ,ಆಟೋ ನಾಗೇಂದ್ರ
ಯಜಮಾನ್ ಕುಮಾರ್, ರಾಜಶೇಖರ್ ಮೂರ್ತಿ ಗ್ರಾಮಸ್ಥರು ಸೇರಿದಂತೆ ಇತರರಿದ್ದರು.

ವರದಿ ಆರ್ ಉಮೇಶ್ ಮಲಾರಪಾಳ್ಯ