ಬೆಂಗಳೂರು ಗ್ರಾಮಾಂತರ ಜಿಲ್ಲೆ ಬೆಂಗಳೂರು ಉತ್ತರ ಜಿಲ್ಲೆಯಾಗಿ ಮರು ನಾಮಕರಣ
ಚಿಕ್ಕಬಳ್ಳಾಪುರ*ಎತ್ತಿನಹೊಳೆ ಯೋಜನೆಗೆ ಒಟ್ಟು 23251 ಕೋಟಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17147 ಕೋಟಿ ಖರ್ಚಾಗಿದೆ:ಸಿಎಂ ಸಿದ್ದರಾಮಯ್ಯ*
ನಂದಿ ಗಿರಿಧಾಮದಲ್ಲಿ ನಡೆದ 2025ನೇ ಸಾಲಿನ 14ನೇ ಸಚಿವ ಸಂಪುಟ ಸಭೆಯ ನಂತರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರನ್ನು ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮರುನಾಮಕರಣ ಮಾಡಲು ಸಂಪುಟ ಸಭೆಯಲ್ಲಿ ತಿರ್ಮಾನಿಸಲಾಗಿದೆ.
ಎತ್ತಿನಹೊಳೆ ಯೋಜನೆಯಡಿ 24.1 TMC ನೀರಿನಲ್ಲಿ ಕುಡಿಯುವ ನೀರಿಗೆ 14 TMC ಬೇಕಾಗಿದೆ. ಆದ್ದರಿಂದ ಮೊದಲು ಕುಡಿಯುವ ನೀರನ್ನು ಕೊಡುವ ಯೋಜನೆ ಮುಗಿಸಲು ಸಂಪುಟ ಸಭೆ ತೀರ್ಮಾನ.
9807 ಕೋಟಿ ಮೊತ್ತದಲ್ಲಿ ಗ್ರಾವಿಟಿ ಮುಖ್ಯ ಕೆನಲ್ ನ ಕೆಲಸ 85% ಮಗಿದಿದೆ. ಹೆಚ್ಚುವರಿಯಾಗಿ ಇದಕ್ಕೆ 8000 ಕೋಟಿ ಬೇಕಾಗಿದೆ. ಬಾಕಿ ಉಳಿದಿರುವುದು 6000 ಚಿಲ್ಲರೆ ಕೋಟಿ. ಎತ್ತಿನಹೊಳೆ ಯೋಜನೆಯಿಂದ ಒಟ್ಟು 9 ಜಿಲ್ಲೆಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಪೂರೈಕೆ.
ಬೆಂಗಳೂರು ಭಾಗದ ಜಿಲ್ಲೆಗಳ 31 ವಿಷಯಗಳು ಚರ್ಚೆಯಾಗಿ 2050 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ.
ಪ್ರತೀ ಜಿಲ್ಲೆಯಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದ್ದು ಇದಕ್ಕೆ 1125.25 ಕೋಟಿ ಮಂಜೂರು ಮಾಡಲಾಗಿದೆ.
ಹಿಂದುಳಿದ ವರ್ಗದ ಅಭ್ಯರ್ಥಿಗಳು IAS, IRS, IPS ಸೇರಿ ಸ್ಪರ್ಧಾತ್ಮಕ ಪರೀಕ್ಷಾ ತರಭೇತಿಗೆ 10 ಕೋಟಿ ವೆಚ್ಚದ ಎರಡು ವಸತಿ ಶಾಲೆಗಳನ್ನು ಬೆಂಗಳೂರಿನಲ್ಲಿ ನಿರ್ಮಿಸಲಾಗುವುದು
ಬೆಂಗಳೂರು ಕೇಂದ್ರ ವಿವಿಗೆ ದಿವಂಗತ ಮಾಜಿ ಪ್ರಧಾನಿ “ಡಾ.ಮನಮೋಹನ್ ಸಿಂಗ್ ಹೆಸರಿಡಲು ತೀರ್ಮಾನ.
ಸಭೆಯಲ್ಲಿ ಆರೋಗ್ಯ, ಶಿಕ್ಷಣ, ಕೃಷಿ, ತೋಟಗಾರಿಕೆ, ನೀರಾವರಿ, ಪ್ರವಾಸೋದ್ಯಮ, ರಸ್ತೆ- ಸೇತುವೆ ಮುಂತಾದ ವಿಷಯಗಳಿಗೆ ಆದ್ಯತೆ ನೀಡಿ ಅನುಮೋದನೆ ನೀಡಲಾಗಿದೆ
ಜೊತೆಗೆ ಚಿಕ್ಕಬಳ್ಳಾಪುರದಲ್ಲಿ ಎಪಿಎಂಸಿ ವತಿಯಿಂದ 141.5 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ಹೂವಿನ ಮಾರುಕಟ್ಟೆ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.
ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯನಗರ ಎಂದು ಹೆಸರಿಡಲು ತೀರ್ಮಾನಿಸಲಾಗಿದೆ.
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಪರಿಶೀಲಿಸಲು ಶ್ರೀಯುತ ಹೆಚ್ ಕೆ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ.
ಒಟ್ಟಾರೆ ಈ ಭಾಗದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು / ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲು ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು.
ಪತ್ರಿಕಾಗೋಷ್ಠಿಯಲ್ಲಿ ಮಾನ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್,ಕೆ ಪಾಟೀಲ್, ಗೃಹ ಮಂತ್ರಿ ಹೆಚ್.ಕೆ ಪಾಟೀಲ್, ಸಚಿವ ಮುನಿಯಪ್ಪ, ಎಂಸಿ ಸುಧಾಕರ್, ಬೈರತಿ ಸುರೇಶ್, ಸಚಿವ ಸಂಪುಟ ಸಚಿವರು, ಅಧಿಕಾರಿಗಳು ಉಪಸ್ಥಿತರಿದ್ದರು.