ಮೊದಲ ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಶನಿಮಹಾತ್ಮ ಸ್ವಾಮಿಗೆ ಬೆಣ್ಣೆ ಅಲಂಕಾರ “

ತಾವರೆಕೆರೆ : ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿಯ ತಾವರೆಕೆರೆ ಗ್ರಾಮದ ಶ್ರೀ ವರಪ್ರದಾಯಕ ಶನೇಶ್ವರ ಸ್ವಾಮಿಯ ದೇವಾಲಯದಲ್ಲಿ ಮೊದಲನೇ ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಶನಿ ಮಹಾತ್ಮ ಸ್ವಾಮಿಗೆ ಬೆಣ್ಣೆ ಅಲಂಕಾರ.

ದೇವಾಲಯದ ಪ್ರಧಾನ ಅರ್ಚಕರಾದ ಸುನಿಲ್ ಶಾಸ್ತ್ರಿ ಮಾತನಾಡಿ ಪ್ರತಿ ವರ್ಷ ಶ್ರಾವಣ ಶನಿವಾರದ ಎಲ್ಲಾ ವಾರಗಳಲ್ಲಿ ವಿಶೇಷ ಪೂಜೆ ಹಾಗೂ ನೆರೆದ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಕಾರ್ಯಕ್ರಮ ಪ್ರತಿ ವರ್ಷವೂ ಸಾಂಪ್ರದಾಯಕವಾಗಿ ನಡೆದುಕೊಂಡು ಬಂದಿದೆ . ಅದರಲ್ಲಿ ಮೊದಲನೇ ವಾರವಾದ ಇಂದು ಸ್ವಾಮಿಗೆ ಬೆಣ್ಣೆ ಅಲಂಕಾರ ಮಾಡಲಾಗಿದೆ ಪ್ರತಿವಾರ ವಿಶೇಷ ಅಲಂಕಾರ ಇರುತ್ತದೆ ಕಡೆಯ ಶ್ರಾವಣ ಶನಿವಾರದಂದು ಲಕ್ಷ್ಮಿ ವೆಂಕಟೇಶ್ವರ ಸ್ವಾಮಿಯ ಅಲಂಕಾರ ಮಾಡಿ ನಿರಂತರ ಊಟದ ವ್ಯವಸ್ಥೆ ಪಲ್ಲಕ್ಕಿ ಉತ್ಸವ ಇರುತ್ತದೆ ಎಂದು ತಿಳಿಸಿದರು.

ಪೂಜಾ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಟಿ ಎಸ್ ರಾಜಶೇಖರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ರವಿ ಕುಮಾರ್, ರಾಮವಧೂತ ಆಶ್ರಮ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯಾದ ಟಿ ನಾಗರಾಜ್ , ರಮೇಶ್, ಮಂಜುನಾಥ್, ರಾಜೇಶ್, ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ತಾವರೆಕೆರೆ ಗ್ರಾಮಸ್ಥರು ಪೂಜಾ ಕಾರ್ಯಕ್ರಮದಲ್ಲಿ ಹಾಜರಿದ್ದರು.