ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪತ್ತಿನ ಸಹಕಾರ ಸಂಘದಿಂದ ಕುರುಬ ಸಮಾಜದ ಮುಖಂಡರ ಸಭೆ

ದೊಡ್ಡಬಳ್ಳಾಪುರ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪತ್ತಿನ ಸಹಕಾರ ಸಂಘದ ವತಿಯಿಂದ ಕನ್ನಡ ಜಾಗೃತ ಭವನದಲ್ಲಿ ಸದಸ್ಯರ ಹಾಗೂ ಸಮಾಜದ ಮುಖಂಡರ ಸಭೆ ನಡೆಯಿತು. ಸಭೆಯಲ್ಲಿ ಪ್ರಮುಖವಾಗಿ ಆ. 17ರಂದು 2024..25ನೇ ಸಾಲಿನಲ್ಲಿ ಹತ್ತನೇ ತರಗತಿ ಹಾಗೂ ದ್ವಿತೀಯ ಪಿ. ಯು. ಸಿ. ಪರೀಕ್ಷೆಯಲ್ಲಿ ಶೇಕಡಾ 85ಕ್ಕೂ ಹೆಚ್ಚಿನ ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ಪ್ರದಾನ ಕಾರ್ಯದರ್ಶಿ ಕೃಷ್ಣಮೂರ್ತಿ ಮಾತನಾಡಿ ಕುರುಬ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರ್ತಿಸಿ ಪ್ರೋತ್ಸಾಹಿಸಿದರೆ ಅವರ ಉನ್ನತ ವಿದ್ಯಾಭ್ಯಾಸಕ್ಕೆ ಸಹಕಾರಿಯಾಗುತ್ತದೆ. ಜೊತೆಗೆ ಹೆಚ್ಚಿನ ಶಿಕ್ಷಣದಿಂದ ಅವರು ಉನ್ನತ ಹುದ್ದೆಗಳನ್ನು ಪಡೆಯುವ ಅವಕಾಶ ಕಲ್ಪಿಸಿದಂತಾಗುತ್ತದೆ. ಪ್ರಸ್ತುತ ಪರಿಸ್ಥಿಯಲ್ಲಿ ಪರಿಸ್ಥಿತಿಯಲ್ಲಿ ಸಮಾಜದ ಎಲ್ಲರೂ ಆರ್ಥಿಕ, ಸಾಮಾಜಿಕ, ರಾಜಕೀಯ ಬಗ್ಗೆ ಚಿಂತನೆ ನಡೆಸಬೇಕಿದೆ. ಜೊತೆಗೆ ನಮ್ಮೊಳಗಿನ ಬಿನ್ನಾಭಿಪ್ರಾಯಗಳನ್ನು ಮರೆತು ಒಗ್ಗಟ್ಟಾದರೆ ಸಮಾಜದ ಪ್ರಗತಿ ಸಾಧ್ಯ ಎಂದು ಹೇಳಿದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರವಿಕುಮಾರ್ ಮಾತನಾಡಿ ಸಮುದಾಯದ ಏಳಿಗೆಗಾಗಿ ಸಹಕಾರ ಸಂಘ ಶ್ರಮಿಸುತ್ತಿದೆ. ಇದಕ್ಕೆ ಸಮುದಾಯದ ಎಲ್ಲಾ ಹಿರಿಯರ ಸಹಕಾರ ಮುಖ್ಯ. ಇದಕ್ಕಾಗಿ ಸಮುದಾಯದ ಸಂಘಟನೆ ತೀರಾ ಅಗತ್ಯವಾಗಿದೆ. ಹೀಗಾಗಿ ಎಲ್ಲರ ಸಹಕಾರ ಅಗತ್ಯವೆಂದು ಹೇಳಿದರು.

ಸಭೆಯಲ್ಲಿ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಆಲಳ್ಳಿ ಚಂದ್ರು, ಪತ್ರಕರ್ತ ನೆಲುಗುದಿಗೆ ಚಂದ್ರು, ಕನ್ನಡ ಪರ ಹೋರಾಟಗಾರ ಚೌಡರಾಜ್, ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಮಂಜುನಾಥ್, ನಿರ್ದೇಶಕರಾದ ಪಟೇಲ್ ಮುನಿರಾಜ್, ಆಲಹಳ್ಳಿ ಗಂಗರಾಜು, ಮಾಧವಿ ರಾಮಚಂದ್ರ, ಕಂಟನಕುಂಟೆ ಪಾಪಣ್ಣ, ಆಟೋ ಮಂಜು ಸೇರಿದಂತೆ ಸಮಾಜದ ಹಲವಾರು ಮುಖಂಡರು ಭಾಗವಹಿಸಿದ್ದರು.