ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಹಣ ಎಣಿಕೆ: 53 ಲಕ್ಷಕ್ಕೂ ಹೆಚ್ಚು ಕಾಣಿಕೆ ಹಣ ಸಂಗ್ರಹ..!

ದೊಡ್ಡಬಳ್ಳಾಪುರ: ತಾಲೂಕಿನ‌ ಇತಿಹಾಸ ಪ್ರಸಿದ್ಧ ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ 53,54,401 ರೂಪಾಯಿ ಕಾಣಿಕೆ ಹಣ ಸಂಗ್ರಹವಾಗಿದೆ. ಮಾ.25 ಸೋಮವಾರ ನಡೆದ‌ ಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಎಣಿಕೆ‌ ಮಾಡಲಾಯಿತು.

ಹುಂಡಿ‌ ಹಣ ಎಣಿಕೆಯಲ್ಲಿ 53,54401 ಲಕ್ಷ ನಗದು, 1ಗ್ರಾಂ. 300 ಮಿಲಿ ಚಿನ್ನ, 1ಕೆ.ಜಿ.540ಗ್ರಾಂ ಬೆಳ್ಳಿ ಸಂಗ್ರಹವಾಗಿದೆ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ‌.

ಹುಂಡಿ ಹಣ ಎಣಿಕೆ‌ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ‌ ಅಧಿಕಾರಿ ನಾಗರಾಜು, ಮುಜರಾಯಿ ಇಲಾಖೆ ತಹಶೀಲ್ದಾರ್ ಜೆ.ಜೆ.ಹೇಮಾವತಿ, ಪ್ರಧಾನ ಅರ್ಚಕ ನಾಗೇಂದ್ರ ಶರ್ಮ, ಕೆನರಾ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ದೇವಾಲಯದ‌ ಸಿಬ್ಬಂದಿ ಭಾಗವಹಿಸಿದ್ದರು.