ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಢಾ.ಕೆ ಸುಧಾಕರ್ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಧಿಕೃತ ಚುನಾವಣಾ ಪ್ರಚಾರ ಆರಂಭ

ದೊಡ್ಡಬಳ್ಳಾಪುರ: ತಾಲೂಕಿನ ವ್ಯಾಪ್ತಿಗೆ ರಾಜಘಟ್ಟದ ಆಂಜನೇಯಸ್ವಾಮಿ ದೇವಸ್ಥಾನ ದೇವ ಮೂಲೆ, ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ದೇವ ಮೂಲೆಯಿಂದ ದೊಡ್ಡಬಳ್ಳಾಪುರದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಇಂದು ನಾಮಪತ್ರ ಸಲ್ಲಿಕೆ ಮಾಡಿದರು, ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ದೊಡ್ಡಬಳ್ಳಾಪುರದಲ್ಲಿ ಇಂದು ಪ್ರಚಾರ ಆರಂಭಿಸಿದರು, ಅದರ ಅಂಗವಾಗಿ ರಾಜಘಟ್ಟ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು, ಜೆಡಿಎಸ್ ರಾಜ್ಯ ಘಟಕದ ಯುವ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿಗೆ ಸಾಥ್ ನೀಡಿದರು,

ಈ ವೇಳೆ ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಹಾಜರಿದ್ದರು. ಶಾಸಕರಾದ ಧೀರಜ್ ಮುನಿರಾಜು, ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಬಮೂಲ್ ನಿರ್ದೇಶಕರಾದ ಬಿ.ಸಿ.ಆನಂದ್ ಕುಮಾರ್, ಕೆ.ಎಂ.ಹನುಮಂತರಾಯಪ್ಪ, ಟಿ.ರಂಗರಾಜ್. ಇ.ಕೆ.ಕೃಷ್ಣಪ್ಪ, ಎಸ್.ಎಂ.ಹರೀಶ್ ಗೌಡ. ಎಂ.ಜಿ. ಶ್ರೀನಿವಾಸ್, ಬಿ.ಸಿ.ನಾರಾಯಣಸ್ವಾಮಿ ಹಾಜರಿದ್ದರು.