ನಗರಸಭೆ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ
ದೊಡ್ಡಬಳ್ಳಾಪುರ.. ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ನಗರಸಭಾ ಸ್ವೀಪ್ ಸಮಿತಿವತಿಯಿಂದ ನಗರಸಭಾ ವ್ಯಾಪ್ತಿಯ ರಂಗಪ್ಪ ವೃತ್ತ ಹಾಗೂ ಆಸ್ಪತ್ರೆ ವೃತ್ತದಲ್ಲಿ ಸಾರ್ವಜನಿಕರಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಕುರಿತು ಮತದಾನ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮತದಾನದ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಈ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ನಗರಸಭೆ ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.