ನಾಳೆ ದೊಡ್ಡಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್ ಚುನಾವಣಾ ಪ್ರಚಾರ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್. ಎ.ನಾರಾಯಣಸ್ವಾಮಿ ಭಾಗಿ
ದೊಡ್ಡಬಳ್ಳಾಪುರ : NDA ಅಭ್ಯರ್ಥಿ ಡಾ.ಕೆ.ಸುಧಾಕರ್ ನಾಳೆ ತಾಲೂಕಿನಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದು, ವಿರೋಧ ಪಕ್ಷದ ಆರ್.ಅಶೋಕ್, ಕೇಂದ್ರ ಸಚಿವರಾದ ಎ.ನಾರಾಯಣಸ್ವಾಮಿ, ಜೆಡಿಎಸ್ ಮುಖಂಡರಾದ ಎಸ್.ಎಂ.ಹರೀಶ್ ಗೌಡರು ಸೇರಿದಂತೆ ಮೈತ್ರಿ ಪಕ್ಷಗಳ ಮುಖಂಡರು ಭಾಗವಹಿಸಲಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ NDA ಅಭ್ಯರ್ಥಿಯಾಗಿ ಡಾ.ಕೆ.ಸುಧಾಕರ್ ಚುನಾವಣಾ ಕಣಕ್ಕೆ ಇಳಿದಿದ್ದಾರೆ, ಅಭ್ಯರ್ಥಿಯ ಪರವಾಗಿ ನಾಳೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ,ದೊಡ್ಡಬೆಳವಂಗಲ, ಸಾಸಲು ಹೋಬಳಿಯ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಚುನಾವಣಾ ಪ್ರಚಾರದಲ್ಲಿ ಆರೋ.ಅಶೋಕ್, ಕೇಂದ್ರ ಸಚಿವರಾದ ಎ.ನಾರಾಯಣಸ್ವಾಮಿ, ಶಾಸಕರಾದ ಧೀರಜ್ ಮುನಿರಾಜು, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಮುನೇಗೌಡ ಸೇರಿದಂತೆ ಮೈತ್ರಿ ಪಕ್ಷದ ಮುಖಂಡರು ಭಾಗವಹಿಸುವರು
ದೊಡ್ಡಬಳ್ಳಾಪುರದಲ್ಲಿ ನಡೆಯುವ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಎಂ.ಹರೀಶ್ ಗೌಡರು ಕಳೆದ 10 ವರ್ಷಗಳಲ್ಲಿ ಮೋದಿ ಸರ್ಕಾರ ಕೇಂದ್ರದಲ್ಲಿ ವಿಶ್ವವೇ ಗಮನ ಸೆಳೆಯುವಂತ ಸಾಧನೆ ಮಾಡಿದೆ, ಮೋದಿ ಹೇಳಿದಂತೆ 400 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ, ಆ 400 ಸ್ಥಾನಗಳಲ್ಲಿ ಡಾ.ಕೆ.ಸುಧಾಕರ್ ಸಹ ಒಬ್ಬರಾಗಿರುತ್ತಾರೆ, ಹೋಬಳಿ ಮಟ್ಟದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಹೇಳಿದರು.