ಸಿದ್ದರಾಮಯ್ಯ ಮತದಾರರ
ಕಿವಿಗೆ ಹೂ ಇಡೋ ಕೆಲಸ ಮಾಡಿದ್ದಾರೆ ವಿಜಯೇಂದ್ರ ಕಿಡಿ

ಚಾಮರಾಜನಗರ: ಕೊಳ್ಳೇಗಾಲ ಪಟ್ಟಣದಲ್ಲಿ
ಸಿಎಂ ಸಿದ್ದರಾಮಯ್ಯ ಮತದಾರರ ಕಿವಿಗೆ ಹೂ ಇಡುವ ಕೆಲಸ ಮಾಡ್ತಿದ್ದಾರೆ. ಎಸ್‌ಸಿ ಎಸ್‌ಟಿ ಅಭಿವೃದ್ಧಿಗೆ ಮೀಸಲಾಗಿದ್ದ 24 ಸಾವಿರ ಕೋಟಿ ಅನುದಾನವನ್ನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿದ್ದಾರೆ. ಆ ಮೂಲಕ ಎಸ್ಸಿ ಎಸ್ಟಿ ಸಮುದಾಯಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಕೊಳ್ಳೇಗಾಲದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ 2000 ರೂಪಾಯಿ ಕೊಡ್ತೀವಿ ಅಂತಾರೆ. ಇನ್ನೊಂದು ಕಡೆ ಮದ್ಯದ ದರ ಶೇ.100ರಷ್ಟು ಏರಿಕೆ ಮಾಡಿದ್ದಾರೆ. ಒಂದು ಕೈಲಿ ಕೊಟ್ಟು ಇನ್ನೊಂದು ಕೈಲಿ ಕಿತ್ತುಕೊಳ್ಳುವ ಕೆಲಸ ಮಾಡ್ತಿದ್ದಾರೆ. ಅಧಿಕಾರಕ್ಕೆ ಬಂದಾಗಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.

ಕಳೆದ 10 ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ 2.93 ಲಕ್ಷ ಕೋಟಿ ತೆರಿಗೆ ಪಾಲು ಕೊಟ್ಟಿದೆ. ಆದರೆ 2004 ರಿಂದ2014 ರವರೆಗೆ ಯುಪಿಎ ಅವಧಿಯಲ್ಲಿ ಕೇವಲ 80 ಸಾವಿರ ಕೋಟಿ ತೆರಿಗೆ ಪಾಲು ಬಂದಿತ್ತು. ಕಳೆದ 10 ವರ್ಷಗಳಲ್ಲಿ ವಿವಿಧ ಯೋಜನೆಗಳಿಗೆ ಎನ್‌ಡಿಎ ಸರ್ಕಾರ 2.36 ಲಕ್ಷ ಕೋಟಿ ಅನುದಾನ ಕೊಟ್ಟಿದೆ. ಆದರೆ ಯುಪಿಎ ಸರ್ಕಾರದ ಅವಧಿ 10 ವರ್ಷಗಳ ಅವಧಿಯಲ್ಲಿ ಕೇವಲ 60 ಸಾವಿರ ಕೋಟಿ ಅನುದಾನ ನೀಡಿತ್ತು ಎಂದು ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಂಡರು.

ಬೆಂಗಳೂರು ಗ್ರಾಮಾಂತರ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಳ್ಳೇಗಾಲದಲ್ಲಿ ಮಾತನಾಡಿದ ಬಿ.ವೈ.ವಿಜೇಂದ್ರ ಕಾಂಗ್ರೆಸ್ಸಿಗರು ಹತಾಶೆಯಿಂದ ಈ ರೀತಿ ಕೆಲಸಕ್ಕೆ ಮುಂದಾಗಿದ್ದಾರೆ ಇದಕ್ಕೆ ಜನರು ತಕ್ಕ ಉತ್ತರ ಕೊಡ್ತಾರೆ ಎಂದರು.

ಯಡಿಯೂರಪ್ಪ ಹಾಗೂ ಅವರ ಮಕ್ಕಳ ಫೋಟೋ ಹಾಕಿ ಪ್ರಚಾರ ಮಾಡಲಿ ಎಂಬ ಈಶ್ವರಪ್ಪ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿ ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಅದು ಅವರ ಹಣೆಬರಹ ಏನಾಗುತ್ತೋ ಆಗ್ಲಿ, ಅದನ್ನು ನಾವು ತೀರ್ಮಾನ ಮಾಡ್ತೀವಿ ಅವರು ಮಾಡೋದು ಬೇಡ ಎಂದರು.

ಚಾಮರಾಜನಗರದಲ್ಲಿ ಯಾವ ಆಪರೇಷನ್ ಹಸ್ತನು ಇಲ್ಲ ಏನು ಇಲ್ಲ ಯಾವ ಸಿದ್ದರಾಮಯ್ಯ ,ಡಿಕೆಶಿ ಏನೂ ಮಾಡೋಕಾಗೋದಿಲ್ಲ , ಅಪಪ್ರಚಾರಕ್ಕೆ ತಲೆಕೆಡಿಸಿಕೊಳ್ಳದೆ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದರು

ವರದಿ ಆರ್ ಉಮೇಶ್ ಮಲಾರಪಾಳ್ಯ