ಮಹಿಳೆಯರ ಬಗ್ಗೆ ಅವಹೇಳನಕಾರಿ ಪದ ಪ್ರಯೋಗ : ದೊಡ್ಡಬಳ್ಳಾಪುರ ಕಾಂಗ್ರೆಸ್ ಮಹಿಳಾ ಘಟಕದಿಂದ ಗೋ ಬ್ಯಾಕ್ ಕುಮಾರಸ್ವಾಮಿ ಘೋಷಣೆ.
ದೊಡ್ಡಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರವಾಗಿ ಪ್ರಚಾರಕ್ಕೆಂದು ಕುಮಾರಸ್ವಾಮಿಯವರು ಇಂದು ದೊಡ್ಡಬಳ್ಳಾಪುರಕ್ಕೆ ಆಗಮಿಸಿದರು, ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕುಮಾರಸ್ವಾಮಿಯವರ ವಿರುದ್ಧ ಗೋ ಬ್ಯಾಕ್ ಘೋಷಣೆಯನ್ನ ಕಾಂಗ್ರೆಸ್ ಮಹಿಳಾ ಘಟಕ ಮಹಿಳೆಯರು ಕೂಗಿ ಪ್ರತಿಭಟನೆ ನಡೆಸಿದರು.
ಚುನಾವಣೆ ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನ ಟೀಕೆ ಮಾಡುವ ಭರದಲ್ಲಿ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ರು, ಗ್ಯಾರಂಟಿ ಯೋಜನೆಯಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆಂದು ಹೇಳಿದ್ರು, ಕುಮಾರಸ್ವಾಮಿಯವರ ಈ ಹೇಳಿಕೆ ಕಾಂಗ್ರೆಸ್ ಪಕ್ಷವನ್ನ ಕೆರಳಿಸಿದ್ದು, ಕಾಂಗ್ರೆಸ್ ಪಕ್ಷದ ಮುಖಂಡರು ಕುಮಾರಸ್ವಾಮಿ ವಿರುದ್ಧ ವಾಗ್ಧಳಿಯನ್ನ ನಡೆಸಿದ್ದಾರೆ, ಮೈತ್ರಿ ಪಕ್ಷದವಾದ ಬಿಜೆಪಿ ಈ ಹೇಳಿಕೆಯಿಂದ ಅಂತರವನ್ನ ಕಾಯ್ದುಕೊಂಡಿದೆ.
ದೊಡ್ಡಬಳ್ಳಾಪುರಕ್ಕೆ ಇಂದು ಕುಮಾರಸ್ವಾಮಿ ಭೇಟಿ ನೀಡಿದ್ದು, ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಪ್ರಚಾರ ನಡೆಸಿದರು, ಇದೇ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕ ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆಯನ್ನ ನಡೆಸಿದರು, ಗೋ ಬ್ಯಾಕ್ ಕುಮಾರಸ್ವಾಮಿ ಘೋಷಣೆಯನ್ನ ಕೂಗುವ ಮೂಲಕ ಮಹಿಳೆಯ ಬಳಿ ಕ್ಷಮೆ ಕೇಳುವಂತೆ ಆಗ್ರಹಿಸಿದರು
ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ರೇವತಿ ಅನಂತರಾಮಯ್ಯರವರು ಮಾಧ್ಯಮದೊಂದಿಗೆ ಮಾತನಾಡಿ, ಕುಮಾರಸ್ವಾಮಿಯವರ ಮನೆಯಲ್ಲಿ ಅಕ್ಕ ತಂಗಿಯರು ಇಲ್ಲವೇ, ಅವರ ಹೆಂಡತಿ ಮತ್ತು ಸೊಸೆ ಸಹ ಒಂದು ಹೆಣ್ಣು , ಈ ಹಿಂದಿನ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿಯವರು ಸುಮಲತಾರವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಇರೋದು ಮಹಿಳೆಯ ಕಷ್ಟಕ್ಕೆ ಸಹಾಯವಾಗಲೆಂದ್ದು ಸರ್ಕಾರ ಜಾರಿಗೆ ತಂದಿದೆ ಇದರಿಂದ ಬಡ ಮಹಿಳೆಯರು, ಗಂಡನನ್ನ ಕಳೆದುಕೊಂಡ ವಿಧವೆಯರಿಗೆ, ಮಕ್ಕಳಿಂದ ದೂರವಾದ ವಯಸ್ಸಾದ ಮಹಿಳೆಯರಿಗೆ ಅನುಕೂಲವಾಗಿದೆ, ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಹೇಳಿಕೆಗೆ ಮಹಿಳೆಯರ ಬಳಿ ಕ್ಷಮೆಯಾಚಿಸಬೇಕೆಂದು ಇದೇ ವೇಳೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕೆಪಿಸಿಸಿ ರಾಜ್ಯ ಕಾರ್ಯದರ್ಶಿಗಳಾದ ವಿಮಲ,ಶಶಿರೇಖಾ, ಮೀನಾ, ಜಿಲ್ಲಾ ಉಪಾಧ್ಯಕ್ಷರಾದ ನಾಗವೇಣಿ, ದೇವನಹಳ್ಳಿ ಘಟಕದ ಅಧ್ಯಕ್ಷರಾದ ರಾಧ, ತೂಬಗೆರೆ ಘಟಕದ ಅಧ್ಯಕ್ಷರಾದ ಜಯಕಾಂತಮ್ಮ, ಕಸಬಾ ಘಟಕದ ಅಧ್ಯಕ್ಷರಾದ ನಾಗರತ್ನಮ್ಮ ಭಾಗವಹಿಸಿದರು.