ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಬಹಿಷ್ಕರಿಸಿದ ದೊಡ್ಡಬಳ್ಳಾಪುರ ಪತ್ರಕರ್ತರು
ದೊಡ್ಡಬಳ್ಳಾಪುರ: ಮಾಧ್ಯಮದವರ ಕುರಿತು ಅವಹೇಳನಾಕಾರಿಯಾಗಿ ಮಾತನಾಡಿದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮಿಪತಿ ಅವರ ಹೇಳಿಕೆ ಖಂಡಿಸಿ ದೊಡ್ಡಬಳ್ಳಾಪುರದ ಸ್ಥಳೀಯ ಪತ್ರಕರ್ತರು ಇಂದು ನಡೆದ ಕಾಂಗ್ರೆಸ್ ಪತ್ರಿಕಾಗೋಷ್ಠಿ ಬಹಿಷ್ಕರಿಸಿ, ಹೊರನಡೆದರು.
ಏ.16 ರಂದು ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ನಡೆಸಿದ ಪತ್ರಿಕಾಗೋಷ್ಠಿ ವೇಳೆ ಲಕ್ಷ್ಮಿಪತಿ ಅವರು ಸ್ಥಳೀಯ ಪತ್ರಕರ್ತರ ಕುರಿತು ಕೇವಲವಾಗಿ ಮಾತನಾಡಿದ್ದ ಹಿನ್ನೆಲೆಯಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿ ಬಹಿಷ್ಕಾರ ಮಾಡಿದರು.
ಕಾಂಗ್ರೆಸ್ ಎಸ್ಸಿ/ಎಸ್ಟಿ ಸಮಿತಿ ವತಿಯಿಂದ ಇಂದು ಪತ್ರಿಕಾಗೋಷ್ಠಿ ಕರೆಯಲಾಗಿತ್ತು. ಗೋಷ್ಠಿಗೆ ಹಾಜರಾದ ಪತ್ರಕರ್ತರು, ಸಭೆ ಆರಂಭವಾಗುತ್ತಿದ್ದಂತೆ ಹೊರನಡೆದರು.
ಮಾಧ್ಯಮದವರನ್ನು ಕಡೆಗಣಿಸಿದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮಿಪತಿ ಅವರನ್ನು ಕೂಡಲೇ ಆ ಸ್ಥಾನದಿಂದ ಉಚ್ಛಾಟಿಸಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಪಕ್ಷದ ಯಾವ ಕಾರ್ಯಕ್ರಮವನ್ನು ವರದಿ ಮಾಡದಿರಲು ಸಮಾನ ಮನಸ್ಕ ಪತ್ರಕರ್ತರು ನಿರ್ಧಾರ ಕೈಗೊಂಡಿದ್ದಾರೆ.