ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಭರ್ಜರಿ ಮತಯಾಚನೆ

ಯಳಂದೂರು:ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಸುನಿಲ್ ಬೋಸ್ ಯಳಂದೂರು ಪಟ್ಟಣದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು.

ಪಟ್ಟಣದ ನಾಡ ಮೇಘಲಮ್ಮ ದೇವಾಲಯದಿಂದ ಜೂನಿಯರ್ ಕಾಲೇಜು ಮೈದಾನದವರೆಗೆ ಅಪಾರ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಸೇರಿ ಮತಯಾಚನೆ ಮಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಮಾತನಾಡಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರೈತರ, ಬಡವರ ಬದುಕು ಮೂರಾಬಟ್ಟೆಯಾಗಿದೆ, ಕಪ್ಪುಹಣ ತರುತ್ತೇವೆ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ. ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದು ರೈತವಿರೋಧಿ ಕಾಯ್ದೆ ಅನುಷ್ಠಾನಗೊಳಿಸಿ ರೈತರಿಗೆ ಮಾರಕವಾಗಿದೆ, ಜತೆಗೆ ಕೋಮು ದ್ವೇಷ ಹೆಚ್ಚಾಗಿದೆ.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಬಡ ಕುಟುಂಬದ ಮಹಿಳೆಯರಿಗೆ 1 ಲಕ್ಷ ರೂ., ಅಲ್ಲದೆ ಉದ್ಯೋಗ ನೇಮಕಾತಿಯಲ್ಲಿ ಶೇ.50 ರಷ್ಟು ಮೀಸಲಾತಿ, ರೈತರಿಗಾಗಿ ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಎಂಎಸ್‌ಪಿ ಕಾನೂನು, ರೈತರ ಸಾಲಮನ್ನಾ, ಕೃಷಿಯನ್ನು ಜಿಎಸ್‌ಟಿಯಿಂದ ಮುಕ್ತಗೊಳಿಸುವುದು ಸೇರಿದಂತೆ 25 ಗ್ಯಾರಂಟಿಗಳನ್ನು ಜಾರಿಗೊಳಿಸುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ.

ನುಡಿದಂತೆ ನಡೆದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ತುಂಬಲು ಮತ್ತು ದಿ.ಆ‌ರ್.ಧ್ರುವನಾರಾಯಣ್ ಅವರ ಆತ್ಮಕ್ಕೆ ಶಾಂತಿ ಸಿಗಲು ಕಾಂಗ್ರೆಸ್‌ ಸಾಧನೆಯನ್ನು ಮನೆ ಮನೆಗೆ ತಿಳಿಸಿ ಹೆಚ್ಚಿನ ಮತಗಳನ್ನು ಕೊಡಿಸಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು…

ಈ ಸಂದರ್ಭದಲ್ಲಿ ಶಾಸಕ ಎ ಆರ್ ಕೃಷ್ಣಮೂರ್ತಿ.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರು ಮಾಜಿ ಶಾಸಕ ಎಸ್ ಜಯಣ್ಣ.ಜಿ ಎನ್ ನಂಜುಂಡಸ್ವಾಮಿ.ಯೋಗೇಶ್ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಟೌನ್ ಪಂಚಾಯ್ತಿ ಮಾಜಿ ಹಾಲಿ ಸದಸ್ಯರು, ಹಾಗೂ ಸಾರ್ವಜನಿಕರು ಹಾಜರಿದ್ದರು