*ಸಾರ್ವತ್ರಿಕ ಲೋಕಸಭಾ ಚುನಾವಣೆ-2024*
*27-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ*
*ಬೆಂ.ಗ್ರಾ. ಜಿಲ್ಲೆಯಲ್ಲಿ ಶೇ81.90 ಮತದಾನ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 26(ಕರ್ನಾಟಕ ವಾರ್ತೆ): ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ81.90ರಷ್ಟು ಮತದಾನವಾಗಿರುವುದಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಎನ್ ಶಿವಶಂಕರ ಅವರು ತಿಳಿಸಿದ್ದಾರೆ.
ಗ್ರಾಮಾಂತರ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಸುಗಮ ಹಾಗೂ ಶಾಂತಿಯುತವಾಗಿ ನಡೆದಿರುವುದಕ್ಕಾಗಿ ಅವರು ಧನ್ಯವಾದ ತಿಳಿಸಿದ್ದಾರೆ.
*ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತದಾನದ ಶೇಕಡಾವಾರು ವಿವರ*
178-ಹೊಸಕೋಟೆ ವಿಧಾನಸಭಾ ಕ್ಷೇತ್ರ: 86.44%
179-ದೇವನಹಳ್ಳಿ ವಿಧಾನಸಭಾ ಕ್ಷೇತ್ರ: 82.69%
180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ: 80.16%
181-ನೆಲಮಂಗಲ ವಿಧಾನಸಭಾ ಕ್ಷೇತ್ರ: 77.98%