ನಾಗರಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ : ಸ್ಥಳಕ್ಕೆ ದೌಡಾಯಿಸಿದ ಪೊಲೀಸರು
ದೊಡ್ಡಬಳ್ಳಾಪುರ : ನಗರದ ನಾಗರಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ನಾಗರಕೆರೆ ಕೋಡಿ ಬಳಿಯ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದು, ವಿಷಯ ತಿಳಿದ ನಗರ ಠಾಣಾ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ, ಶವವನ್ನು ದಡಕ್ಕೆ ಸೇರಿಸುವ ಪ್ರಯತ್ನ ಮಾಡುತ್ತಿದ್ದಾರೆ.
ಸದ್ಯ ಮೃತ ಮಹಿಳೆಯ ವಿಳಾಸ, ಹೆಸರು, ವಯಸ್ಸು ಪತ್ತೆಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.