ಸಾಗಡೆ ಗ್ರಾಮದಲ್ಲಿ ಡಾ ಬಿ ಆರ್ ಅಂಬೇಡ್ಕರ್ ರವರ 133ನೇ ಜಯಂತಿ ಆಚರಣೆ
ಚಾಮರಾಜನಗರ ಸಾಗಡೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ರವರ 133ನೇ ಜಯಂತಿ ಆಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು
ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಟಾಣಿ ಮಕ್ಕಳಿಂದ ಜ್ಯೋತಿ ಬೆಳಗಿಸುವ ಮೂಲಕ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ನಂತರ ಗ್ರಾಮದ ಎಲ್ಲಾ ಕೋಮಿನ ಯಜಮಾನರು ಮುಖಂಡರು ಹಾಗೂ ಗ್ರಾಮಸ್ಥರು ಸೇರಿ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಯಂತಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ವಿಶೇಷವಾಗಿ ಈ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ, ಭಗೀರಥ . ಬಾಬು ಜಗಜೀವನರಾಂ, ಕನಕದಾಸರು, ಬುದ್ಧ, ಬಸವೇಶ್ವರರು, ಅಂಬೇಡ್ಕರ್,ಮತ್ತು ಜ್ಯೋತಿಬಾ ಫುಲೆ ರವರ ಭಾವಚಿತ್ರ ಅಳವಡಿಸಿ ಸರ್ವ ಜನಾಂಗದ ಶಾಂತಿಯ ತೋಟ ಎಂಬ ಘೋಷವಾಕ್ಯಕ್ಕೆ ತಕ್ಕಂತೆ ಈ ಜಯಂತಿ ಕಾರ್ಯಕ್ರಮ ನೆಡೆದದ್ದು ಸಾರ್ವಜನಿಕರ ಗಮನ ಸೆಳೆಯಿತು.
ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಡಾ ಬಿ ಆರ್ ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷರು ಸದಸ್ಯರು ಪದಾಧಿಕಾರಿಗಳು ಹಾಗೂ ಗ್ರಾಮದ ಎಲ್ಲಾ ಕೋಮಿನ ಮುಖಂಡರು ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಜಯಂತಿ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು
ಈ ಕಾರ್ಯಕ್ರಮದ ಉಸ್ತುವಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡುಗೆಯವರು ಮತ್ತು ಅಡುಗೆ ಸಹಾಯಕರ ಸಂಘದ ಅಧ್ಯಕ್ಷರಾದ ಪ್ರಮೋದ್ ಎಂ, ಮತ್ತು ಡಾ ಬಿ ಆರ್ ಅಂಬೇಡ್ಕರ್ ಸಂಘದ ಪದಾಧಿಕಾರಿಗಳಾದ ಮಧು, ಕಿರಣ್, ಉಮೇಶ್, ಸೂರ್ಯ,ಕಾಳಸ್ವಾಮಿ,ಚೇತನ್, ಮನೋಜ್, ಕಾರ್ತಿಕ್, ಮಹೇಶ್ , ಮಾಯಿ,ಮಲ್ಲೇಶ್ ಹಾಗೂ ಗ್ರಾಮದ ಎಲ್ಲಾ ಯಜಮಾನರು ಮುಖಂಡರು ಮಹಿಳೆಯರು ಯುವಕ ಯುವತಿಯರ ಸಹಕಾರದಿಂದ ಯಶಸ್ವಿಯಾಗಿ ಜಯಂತಿ ಆಚರಣೆ ನೆರವೇರಿತು.
ವರದಿ ಆರ್ ಉಮೇಶ್ ಮಲಾರಪಾಳ್ಯ