ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಸಿ.ಕೆ.ಬಾಬಾ ಅಧಿಕಾರ ಸ್ವೀಕಾರ

ಬೆಂಗಳೂರು : ಗ್ರಾಮಾಂತರ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಸಿ.ಕೆ.ಬಾಬಾರವರು ಇಂದು ಅಧಿಕಾರ ವಹಿಸಿಕೊಂಡರು, ನಿರ್ಗಮಿತ ಪೊಲೀಸ್ ಅಧೀಕ್ಷಕರಾದ ಮಲ್ಲಿಕಾರ್ಜುನ ಬಾಲದಂಡಿಯವರು ನೂತನ ಪೊಲೀಸ್ ಅಧೀಕ್ಷಕರಿಗೆ ಶುಭ ಕೋರಿದರು.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಐಪಿಎಸ್ ಅಧಿಕಾರಿಗಳ ವರ್ಗಾವಣೆಯಾಗಿದ್ದು, ರಾಜ್ಯ ಆಡಳಿತ ಸುಧಾರಣೆಗಾಗಿ, ಕಾನೂನು ಸುವ್ಯವಸ್ಥೆ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿವಿಧ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಮಂಗಳವಾರ ಆದೇಶ ಹೊರಡಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಮಲ್ಲಿಕಾರ್ಜುನ ಬಾಲದಂಡಿಯವರನ್ನ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ, ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಸಿ.ಕೆ.ಬಾಬಾರವರು ನಿಯೋಜನೆಯಾಗಿದ್ದು, ಬೆಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.