ಹಾಡೋನಹಳ್ಳಿ ಪಂಚಾಯಿತಿ ಅಧ್ಯಕ್ಷರ ಚುನಾವಣೆ ನೂತನ ಅಧ್ಯಕ್ಷರಾಗಿ ಮಂಜುಳಾಪುರುಷೋತ್ತಮ್ ಅವಿರೋಧ ಆಯ್ಕೆ
ದೊಡ್ಡಬಳ್ಳಾಪುರ : ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷರ ಚುನಾವಣೆ ನೆಡೆದಿದ್ದು. ನೂತನ ಅಧ್ಯಕ್ಷರಾಗಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಮಂಜುಳಾ ಪುರುಷೋತ್ತಮ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜೂನ್ 04 ರಂದು ನೆಡೆದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಸರ್ವ ಸದಸ್ಯರು ಅವಿರೋಧವಾಗಿ ಶ್ರೀಮತಿ ಮಂಜುಳಾಪುರುಷೋತ್ತಮ್ ರವರನ್ನು ಆಯ್ಕೆ ಮಾಡಿದ್ದಾರೆ.
ನೂತನ ಅಧ್ಯಕ್ಷರಿಗೆ ಸ್ಥಳೀಯ ಜೆಡಿಎಸ್ ಮುಖಂಡರಾದ ಅಪ್ಪಯಣ್ಣ ಸೇರಿದಂತೆ ಹಲವು ಗಣ್ಯರು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮೇಳೆಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀನಿವಾಸ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಪ್ಪಯ್ಯಣ್ಣ, ಹೋಬಳಿ ಜೆಡಿಎಸ್ ಅಧ್ಯಕ್ಷ ಜಗನ್ನಾಥ್ಹಾಡೋನಹಳ್ಳಿ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷ ಮುನೇಗೌಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾರಾಯಣಪ್ಪ. ಬಿಜೆಪಿ ಮುಖಂಡ ಓಬದೇನಹಳ್ಳಿ ಮುನಿಯಪ್ಪ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮುದ್ದುಕೃಷ್ಣ ಉಪಸ್ಥಿತರಿದ್ದರು.