ದೊಡ್ಡಬಳ್ಳಾಪುರದಲ್ಲಿ ಕನ್ನಡ ಜ್ಯೋತಿ ರಥಕ್ಕೆ ಅದ್ದೂರಿ ಸ್ವಾಗತ
ದೊಡ್ಡಬಳ್ಳಾಪುರ: ದೇವನಹಳ್ಳಿ ತಾಲ್ಲೂಕಿನಿಂದ ಆಗಮಿಸಿದ ಕನ್ನಡ ಜ್ಯೋತಿ ರಥವನ್ನು ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ದೇವನಹಳ್ಳಿ ತಾಲ್ಲೂಕಿನ ಗಡಿಭಾಗದಲ್ಲಿ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಾಶ್ರೀ, ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕ ರವಿಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಮತ್ತು ಕನ್ನಡಪರ ಸಂಘಟನೆಗಳ ಮುಖಂಡರು ಸ್ವಾಗತಿಸಿದರು.
ಆದ್ದೂರಿ ಮೆರವಣಿಗೆ:- ದೊಡ್ಡಬಳ್ಳಾಪುರ ತಾಲ್ಲೂಕಿಗೆ ಆಗಮಿಸಿ ಕನ್ನಡ ಜ್ಯೋತಿ ರಥಕ್ಕೆ ನಾಗದೇನಹಳ್ಳಿ, ಮೋಪರಹಳ್ಳಿ, ರಘುನಾಥಪುರ ಸರ್ಕಾರಿ ಶಾಲೆ ವಿದ್ಯಾರ್ಥಿಗಳು, ಜವಾಹರ ನವೋವಿದ್ಯಾಲಯದ ವಿದ್ಯಾರ್ಥಿಗಳು ಪುಪ್ಪಾರ್ಚನೆ ಮಾಡಿದರು. ಬಾಶೆಟ್ಟಿಹಳ್ಳಿಯಲ್ಲಿ ನಡೆದ ಆದ್ದೂರಿ ಮೆರವಣಿಗೆಯಲ್ಲಿ ಮಹಿಳೆಯರಿಂದ ಪೂರ್ಣ ಕುಂಭ ಸ್ವಾಗತ ಮತ್ತು ಕಲಾ ತಂಡಗಳೊಂದಿಗೆ ಗ್ರಾಮದ ಮುಖಂಡರು ಮತ್ತು ಶಾಲಾ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ ನಗರಸಭೆಯ ಸದಸ್ಯರುಗಳು ಮತ್ತು ಪೌರಾಯುಕ್ತ ಕಾರ್ತಿಕ್ ಈಶ್ವರ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್ ಡಿ ಕ್ರಾಸ್ ಬಳಿ ಕನ್ನಡ ಜ್ಯೋತಿ ರಥವನ್ಬು ಸ್ವಾಗತಿಸಿದರು. ನಂತರ ಆಸ್ಪತ್ರೆ ವೃತ್ತ, ರಂಗಪ್ಪ ಸರ್ಕಲ್, ಅರಳುಮಲ್ಲಿಗೆ ಬಾಗಿಲು, ಕೆ.ಸಿ.ಪಿ ವೃತ್ತ, ಕೊಂಗಾಡಿಯಪ್ಪ ಪ್ರೌಢಶಾಲೆ, ಇಸ್ಲಾಂಪುರ , ತಾಲ್ಲೂಕು ಕಛೇರಿ ವೃತ್ತದ ತನಕ ನಡೆದ ಆದ್ದೂರಿ ಮೆರವಣಿಗೆಯಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಮತ್ತು ಕನ್ನಡಪರ ಸಂಘಟನೆಗಳು ಕನ್ನಡ ಭಾವುಟ ಹಿಡಿದು ಸ್ವಾಗತಿ, ಪುಷ್ಪ ನಮನ ಸಲ್ಲಿದರು.
ಜಿಲ್ಲಾಧಿಕಾರಿ ಮಾಲಾರ್ಪಣೆ :- ದೊಡ್ಡಬಳ್ಳಾಪುರ ನಗರದ ನಡೆದ ಕನ್ನಡ ಜ್ಯೋತಿ ರಥದ ಮೆರವಣಿಗೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್, ಜಿಲ್ಲಾಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ ಭಾಗವಹಿಸಿ ರಥಕ್ಕೆ ಮಾಲಾರ್ಪಣೆ ಮಾಡಿದರು.
ಕನ್ನಡ ಜ್ಯೋತಿ ರಥದ ಮೆರವಣಿಗೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರುಗಳಾದ. ತ.ನ.ಪ್ರಭುದೇವ್, ಸಂಜೀವನಾಯಕ್, ನಗರಸಭಾ ಸದಸ್ಯ ಮಲ್ಲೇಶ್, ಸು.ನರಸಿಂಹಮೂರ್ತಿ, ಬಿ.ಎಸ್.ಚಂದ್ರಶೇಖರ್, ರಾಜಘಟ್ಟರವಿ, ಮುರುಳಾರಾಧ್ಯ, ಡಿ.ಪಿ.ಆಂಜನೇಯ, ನಂಜಪ್ಪ, ಲೋಕೇಶ್, ನಾಗರಾಜು, ಡಿ.ವೆಂಕಟೇಶ್, ನಂಜಪ್ಪ, ತೂಬಗೆರೆ ಷರೀಫ್, ಪ್ರಮೀಳಾ ಮಹಾದೇವ್, ಮುನಿಪಾಪಣ್ಣ, ಪರಮೇಶ್, ನಾಗರತ್ನಮ್ಮ , ಕಮಲನಾಥ್, ದಾದಾಪೀರ್ ಮುಂತಾದವರು ಮತ್ತು ಕನ್ನಡಾಭಿಮಾನಿಗಳು ಭಾಗವಹಿಸಿದ್ದರು.