ಡಾ. ಕೆ. ಎಂ. ಕೃಷ್ಣಮೂರ್ತಿ ರವರಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷರು, ಹಿರಿಯ ರಂಗಭೂಮಿ ಕಲಾವಿದ ಕಂಟನಕುಂಟೆ ಡಾ.. ಕೆ. ಎಂ ಕೃಷ್ಣಮೂರ್ತಿ ರವರ ರಂಗಭೂಮಿ ಸೇವೆಯನ್ನು ಗುರ್ತಿಸಿ ರಾಜ್ಯ ಸರ್ಕಾರದ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ನಾಟಕ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾದ ಕೃಷ್ಣಮೂರ್ತಿ ಪತ್ರಿಕೆಯೊಂದಿಗೆ ಮಾತನಾಡಿ, ಸುಮಾರು 45ವರ್ಷಗಳಿಂದ ರಂಗಭೂಮಿ ಕಲಾ ಸೇವೆಯನ್ನು ಮಾಡಿಕೊಂಡು ಬಂದಿದ್ದೇನೆ. ನಾನು ರಾಜಕಾರಣದಲ್ಲಿದ್ದರು ಸಹ ನನಗೆ ಅತ್ಯಂತ ತೃಪ್ತಿ ನೀಡಿದ್ದು ರಂಗಭೂಮಿಯ ಬಣ್ಣದ ಬದುಕು. ನಾಡಿನ ಹಲವಾರು ಹಿರಿಯ ರಂಗಕರ್ಮಿಗಳ ಜೊತೆ ಕರ್ನಾಟಕ ನಾಟಕ ಅಕಾಡೆಮಿ ನನ್ನ ಸಾಧನೆಯನ್ನು ಗುರ್ತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ನನಗೆ ಅತ್ಯಂತ ಸಂತಸ ತಂದಿದೆ. ನನ್ನನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರು ಹಾಗೂ ಸದಸ್ಯರುಗಳಿಗೆ ನಾನು ಅಭಾರಿಯಾಗಿದ್ದೇನೆ ಎಂದು ಕೃಷ್ಣ ಮೂರ್ತಿ ರವರು ಹೇಳಿದರು.
ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿಗೆ ಬಾಜನರಾದ ಕೃಷ್ಣ ಮೂರ್ತಿರವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಲಾವಿದರ ಸಂಘದ ಅಧ್ಯಕ್ಷ ರಬ್ಬನಹಳ್ಳಿ ಕೆಂಪಣ್ಣ, ತಾಲೂಕು ಕಲಾವಿದರ ಸಂಘದ ಅಧ್ಯಕ್ಷರಾದ ರಾಮಾಂಜಿನಪ್ಪ, ಕರ್ನಾಟಕ ರಾಜ್ಯ ಕರುನಾಡ ಕಲಾವಿದರ ಸಂಘದ ಅಧ್ಯಕ್ಷ ಜಲಮಂಡಳಿ ರಾಮಚಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲಾ ರಂಗಭೂಮಿ ಕಲಾವಿದರ ಸಂಘ, ರಾಜ್ಯ ವಿಜ್ಞಾನ ಪರಿಷತ್ ಅಧ್ಯಕ್ಷ ಹುಲಿಕಲ್ ನಟರಾಜ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೃಷ್ಣಪ್ಪ, ತಾಲೂಕು ಕ. ಸಾ. ಪ ಅಧ್ಯಕ್ಷ ಗೋವಿಂದರಾಜು, ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಈರಣ್ಣ, ಪ್ರದಾನ ಕಾರ್ಯದರ್ಶಿ ಸೋಮಣ್ಣ, ತಾಲೂಕು ಕುರುಬರ ಸಂಘ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳು ರಾಜ್ಯ ಶೋಷಿತ ವರ್ಷಗಳ ಒಕ್ಕೂಟದ ಸಂಘದ ಅದ್ಯಕ್ಷ ಕೆ. ಎಂ ರಾಮಚಂದ್ರಪ್ಪ ಸೇರಿದಂತೆ ಹಲವಾರು ಗಣ್ಯರು ಕೃಷ್ಣ ಮೂರ್ತಿರವನ್ನು ಅಭಿನಂದಿಸಿದ್ದಾರೆ.