ಘಾಟಿ ಸುಬ್ರಮಣ್ಯ ಸ್ವಾಮಿಗೆ ವಿಶೇಷ ಅಲಂಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲ್ಲೂಕಿನ,ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ
ಶ್ರಾವಣದ ಮೊದಲನೆಯ ಶುಕ್ರವಾರ ನಾಗರ ಪಂಚಮಿ ಹಬ್ಬದ ಪ್ರಯುಕ್ತ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.

ಬೆಳಗ್ಗೆ ಅಭಿಷೇಕ ನಂತರ ದೇವರಿಗೆ ಅಲಂಕಾರ ಮಾಡಿ ನಂತರ ಸುಬ್ರಹ್ಮಣ್ಯ ಸ್ವಾಮಿಯ ಮೆರವಣಿಗೆಯ ದೇವರನ್ನು ದೇವಸ್ಥಾನದಿಂದ ಹೊರಟು ನಗರದ ರಾಜ ಬೀದಿಯಲ್ಲಿ ಮೆರವಣಿಗೆಯನ್ನು ಮಾಡಿ ನಂತರ ದೇವಸ್ಥಾನಕ್ಕೆ ತರಲಾಯಿತು. ದೇವಸ್ಥಾನಕ್ಕೆ ಬಂದ ಭಕ್ತಾದಿಗಳಿಗೆ ಪ್ರಸಾದ ಮತ್ತು ಊಟದ ವ್ಯವಸ್ಥೆ ಮಾಡಲಾಗಿತ್ತು

ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಂ ನಾರಾಯಣಸ್ವಾಮಿ ಮುಜರಾಯಿ ತಹಸಿಲ್ದಾರ್ ಜೆಜೆ ಹೇಮಾವತಿ ಪ್ರಧಾನ ಅರ್ಚಕರು ಆರ್. ಸುಬ್ರಹ್ಮಣ್ಯ ದೇವಾಲಯದ ಸಿಬ್ಬಂದಿ ನಂಜಪ್ಪ ಹಾಗು ದೇವಾಲಯಕ್ಕೆ ಬಂದ ಭಕ್ತಾದಿಗಳು ಹಾಜರಿದ್ದರು