ಪ್ರಥಮ ಶ್ರಾವಣ ಶನಿವಾರ ಮಧುರೆ ಶನಿ ಮಹಾತ್ಮ ದೇವಾಲಯದಲ್ಲಿ ಮಾಜಿ ಶಾಸಕ ವೆಂಕಟರಮಣಯ್ಯ ರವರಿಂದ ವಿಶೇಷ ಪೂಜೆ, ಅನ್ನ ಸಂತರ್ಪಣೆ
ಪ್ರಥಮ ಶ್ರಾವಣ ಶನಿವಾರವಾದ ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ದ ಮಧುರೆ ಶನಿ ಮಹಾತ್ಮ ದೇವಾಲಯದಲ್ಲಿ ಪ್ರತಿ ವರ್ಷದ ಮೊದಲ ಅನ್ನ ಸಂತರ್ಪಣೆ ಸೇವೆಯನ್ನು ಅನೇಕ ವರ್ಷಗಳಿಂದ ನೆಡೆಸುತ್ತಾ ಬಂದಿರುವ ಮಾಜಿ ಶಾಸಕರಾದ ಟಿ.ವೆಂಕಟರಮಣಯ್ಯರವರ ಕುಟುಂಬದಿಂದ ಈ ಬಾರಿಯು ಸಹ ಅನ್ನ ಸಂತರ್ಪಣೆ ಕಾರ್ಯವನ್ನು ನೆರವೇರಿಸಿದರು.ದೇವಾಲಯಕ್ಕೆ ಬಂದ ನೂರಾರು ಭಕ್ತರು ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಬಾಗವಹಿಸಿ ಪ್ರಸಾದವನ್ನು ಸ್ವೀಕರಿಸಿದರು.