ತೂಬಗೆರೆ ಪದವೀಪೂರ್ವ ಕಾಲೇಜಿನಲ್ಲಿ ಸ್ವತಂತ್ರೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲ್ಲೂಕಿನ,ತೂಬಗೆರೆ ಹೋಬಳಿಯ ಗ್ರಾಮಾಂತರ ಬಾಗದ ಹಳ್ಳಿಗಳಹಾಗು ಪಟ್ಟಣದ ಸರ್ಕಾರಿ ಕಾಲೇಜು ಹಾಗೂ ವಿವಿಧ ಶಾಲೆ ಮತ್ತು ಕಚೇರಿಗಳಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವೈಶಿಷ್ಟ್ಯ ಪೂರ್ಣವಾಗಿ ಆಚರಿಸಲಾಯಿತು.

ತೂಬಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೇ ನಂಜಮ್ಮ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅರವಿಂದ್, ಕೆಪಿಸಿಸಿ ಸದಸ್ಯ ಮುನಿರಾಜು, ಹೋಬಳಿ ಹಿತರಕ್ಷಣ ಸಮಿತಿ ಅಧ್ಯಕ್ಷರಾದ ರವಿ ಸಿದ್ದಪ್ಪ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್, ಹಿರಿಯ ಸದಸ್ಯ ಮುನಿಕೃಷ್ಣಪ್ಪ, ಕೃಷ್ಣಪ್ಪ ಮುಂತಾದವರು ಭಾಗಿಯಾಗಿದ್ದರು.

ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸತ್ಯನಾರಾಯಣಪ್ಪನವರು ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಕಡಿಮೆ ಮಾಡಿ ,ಶೈಕ್ಷಣಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು. ಪ್ರಾಂಶುಪಾಲರು, ಹಾಗೂ ಉಪನ್ಯಾಸಕರು ಹಾಜರಿದ್ದರು.

ಶಾಲೆಯ 2008ನೇ ಬ್ಯಾಚಿನ ಹಳೆ ವಿದ್ಯಾರ್ಥಿಗಳು ಕಳೆದ ವರ್ಷ ಶಾಲಾ ಮಟ್ಟದಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಿದರು.

ಇಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ವೇಷಭೂಷಣ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಕಣ್ಮನ ಸೆಳೆದವು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶಾಲಾ ಮತ್ತು ಕಾಲೇಜು ಮಕ್ಕಳು ಬ್ಯಾಂಡ್ಸೆಟ್ ವಾದ್ಯದೊಂದಿಗೆ ಮೆರವಣಿಗೆ ನಡೆಸಿದರು ಇದೆ ಸಂದರ್ಭದಲ್ಲಿ ಮಕ್ಕಳಿಗೆ ಬಸ್ ನಿಲ್ದಾಣದಲ್ಲಿ ಗ್ರಾಮಸ್ಥರು ಸಿಹಿತಿಂಡಿ ವಿತರಿಸಿದರು. ಯುವ ಮುಖಂಡ ಉದಯ ಆರಾಧ್ಯ, ಎಸ್ಡಿಎಂಸಿ ಅಧ್ಯಕ್ಷ ಹನುಮಂತರಾಜು, ಹೋಟೆಲ್ ಅಪ್ಪಿ, ರವಿ ಮುಂತಾದವರು ಹಾಜರಿದ್ದರು.

ಉಳಿದಂತೆ ಸರ್ಕಾರಿ ಆರೋಗ್ಯ ಕೇಂದ್ರ ನಾಡಕಚೇರಿ ಪಶು ಆರೋಗ್ಯ ಕೇಂದ್ರ ಹಾಲು ಉತ್ಪಾದಕ ಸಹಕಾರ ಸಂಘ ತೂಬಗೆರೆ ವ್ಯವಸಾಯೋತ್ಪನ್ನ ಸಹಕಾರ ಸಂಘ ವಿವಿಧ ಕಚೇರಿಗಳಲ್ಲಿ ಸ್ವತಂತ್ರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.