ಗೌರಿ ಗಣೇಶ ಹಬ್ಬ-ಸಾರ್ವಜನಿಕರಿಂದ ಬಲವಂತವಾಗಿ ಹಣ ಮಾಡಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ–ಸಾಧಿಕ್ ಪಾಷ
ದೊಡ್ಡಬಳ್ಳಾಪುರ: ಗೌರಿ ಗಣೇಶ ಚತುರ್ಥಿ ಹಬ್ಬಕ್ಕೆ ಸಾರ್ವಜನಿಕರಿಂದ ಬಲವಂತವಾಗಿ ಹಣ ವಸೂಲಿ ಮಾಡಬಾರದು ಮಾಡಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದೆಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಸಾಧಿಕ್ ಪಾಷ ಹೇಳಿದರು.ಅವರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ನಡೆದ ಗಣೇಶ ಚತುರ್ಥಿ–ಈದ್ ಮಿಲಾದ್ ಹಬ್ಬಗಳ ಸಂದರ್ಭದಲ್ಲಿ ಶಾಂತಿಯುತವಾಗಿ ಹಬ್ಬಗಳನ್ನು ಆಚರಿಸಲು ಕಾರ್ಯಕ್ರಮ ಆಯೋಜಕರಿಗೆ ಮನವಿ ಮಾಡಿದರು.ಶಾಂತಿ ಸಭೆಯ ಅದ್ಯಕ್ಷತೆ ವಹಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಡಿಷನಲ್ ಎಸ್. ಪಿ ಗಳಾದ ನಾಗೇಶ್ ಕುಮಾರ್ ರವರು ಮಾತನಾಡಿ ಇಲಾಖೆಯ ನಿಭಂದನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಟಾಪಿಸುವವರಿಗೆ ಮಾತ್ರ ಅನ್ವಯವಾಗುತ್ತದೆ,ಮನೆಗಳಲ್ಲಿ ಗಣೇಶ ಪ್ರತಿಷ್ಟಾಪನೆ ಗೆ ಅನ್ವಯಿಸುವುದಿಲ್ಲ ಮತ್ತು ಪಿ.ಒ.ಪಿ ಗಣೇಶ ಮೂರ್ತಿ ಪ್ರತಿಷ್ಟಾಪನೆ ಗೆ ಅನುಮತಿ ಇಲ್ಲ ಸಾರ್ವಜನಿಕ ಗಣೇಶ ಪ್ರತಿಷ್ಟಾಪನೆ ಮಾಡುವವರು ಕಡ್ಡಾಯವಾಗಿ ನಗರಸಭೆ, ಪಟ್ಟಣ ಪಂಚಾಯಿತಿ, ಪಂಚಾಯ್ತಿ ಪೋಲಿಸ್ ಇಲಾಖೆ ಬೆಸ್ಕಾಂ ಅಗ್ನಿ ಶಾಮಕ ಇಲಾಖೆಗಳ ಅನುಮತಿ ಕಡ್ಡಾಯವಾಗಿ ಪಡೆಯಬೇಕು ಎಂದರು.ಸಾರ್ವಜನಿಕರು ಮತ್ತು ಕಾರ್ಯಕ್ರಮಗಳ ಆಯೋಜಕರ ಮನವಿಯನ್ನು ಆಲಿಸಿದ ನಂತರ ಮಾತನಾಡಿದ ಇನ್ಸ್‌ಪೆಕ್ಟರ್ ಸಾಧಿಕ್ ಪಾಷ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಪ್ರತಿಷ್ಟಾಪನೆ ಮಾಡುವಾಗ ವಾಹನ ಸಂಚಾರಕ್ಕೆ ಹಾಗು ಸಾರ್ವಜನಿಕರಿಗೆ ತೊಂದರೆಯಾಗದಂತೆ ಆಯೋಜಕರು ನೋಡಿಕೊಳ್ಳಬೇಕು ಮತ್ತು ಗಣೇಶ ಮೂರ್ತಿ ವಿಸರ್ಜನೆ ವೇಳೆ ನುರಿತ ಈಜುಗಾರರಿಂದ ಮೂರ್ತಿ ವಿಸರ್ಜಿಸಲು ಮನವಿ ಮಾಡಿದರು.
ಶಾಂತಿ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಡಿಷನಲ್ ಎಸ್ ಪಿ ಗಳಾದ ನಾಗೇಶ್ ಕುಮಾರ್,ಗ್ರಾಮಾಂತರ ಪೋಲಿಸ್ ಇನ್ಸ್ಪೆಕ್ಟರ್ ಸಾದಿಕ್ ಪಾಷ ಮತ್ತು ಸಿಬ್ಬಂದಿಗಳು ಬಾಗವಹಿಸಿದ್ದರು.