*ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಬಾಲ್ಯ ವಿವಾಹ ತಡೆ ಎಲ್ಲಾ ಅಧಿಕಾರಿಗಳ ಕರ್ತವ್ಯ ಹಿರಿಯ ನ್ಯಾಯದೀಶ ಈಶ್ವರ್..

ಯಳಂದೂರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿರುದ್ದಿ ಇಲಾಖೆ, ಪೊಲೀಸ್ ಇಲಾಖೆ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ, ಹಾಗೂ ವಿವಿಧ ಇಲಾಖೆಗಳು ಮಕ್ಕಳ ಸಹಾಯವಾಣಿ 1098 ಇವರ ಸಹಯೋಗದಲ್ಲಿ ಮಕ್ಕಳ ಹಕ್ಕುಗಳು, ಬಾಲ್ಯ ವಿವಾಹ ನಿಷೇದ ಕಾಯ್ದೆ, 2006 ಕರ್ನಾಟಕ ತಿದ್ದುಪಡಿ 2016,ಪೋಕ್ಸೋ ಕಾಯ್ದೆ 2012, ಮಕ್ಕಳಿಗೆ ಸಂಬಂದಿಸಿದ ಕಾನೂನು ಗಳು ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಶಾಲಾ ಕಾಲೇಜು ಮಕ್ಕಳಿಗೆ ಅರಿವು ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮವನ್ನು ಗೌರವಾನ್ವಿತ ಹಿರಿಯ ನ್ಯಾಯಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ್ ರವರು ಉದ್ಘಾಟನೆ ಮಾಡಿ ಮಾತನಾಡಿ ಮಕ್ಕಳ ರಕ್ಷಣೆ ಹಾಗೂ ಬಾಲ್ಯ ವಿವಾಹ ತಡೆಗೆ ಪೊಲೀಸರ ಸಹಕಾರ ಅವಶ್ಯವಿದ್ದು ಚೈಲ್ಡ್ ಹೆಲ್ಪ್ಲೈನ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೊಂದಿಗೆ ಪೊಲೀಸರು ಸಹಕರಿಸಬೇಕು,ಬಾಲ್ಯ ವಿವಾಹ ಅಂತಹ ಸಂದರ್ಭದಲ್ಲಿ ಕಡ್ಡಾಯವಾಗಿ ಶಿಶು ಅಭಿವೃದ್ಧಿ ಅಧಿಕಾರಿಗಳು ಹಾಜರಿರಬೇಕು, ಅಸಹಾಯಕ ಹಾಗೂ ಸಂಕಷ್ಟದಲ್ಲಿರುವ ಮಕ್ಕಳ ರಕ್ಷಣೆ ಹಾಗೂ ಬಾಲ್ಯ ವಿವಾಹ ತಡೆ ಎಲ್ಲಾ ಅಧಿಕಾರಿಗಳ ಕರ್ತವ್ಯವಾಗಿದೆ, ಭಾರತ ಸರಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ಸಹಾಯವಾಣಿಯನ್ನು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುವಂತೆ ಸ್ಥಾಪಿಸಿದೆ, ಎಲ್ಲಾ ಅಧಿಕಾರಿಗಳು ಜವಾಬ್ದಾರಿಯಿಂದ ಸಹಕರಿಸುವಂತೆ ಸೂಚಿಸಿದರು.ಮಕ್ಕಳ ವಯೋಮಾನದ ಬಗ್ಗೆ ಪರಿಶೀಲನೆ ನಡೆಸಬೇಕು, ಸಾಮೂಹಿಕ ವಿವಾಹ ನೊಂದನೇ ಮತ್ತು ಅನುಮತಿ ಕಡ್ಡಾಯವಾಗಿ ಪಡೆಯಬೇಕು, ಯಾವುದೇ ಒಂದು ಮಕ್ಕಳ ಹಾಗೂ ಮಕ್ಕಳ ಹಕ್ಕುಗಳ ಉಲ್ಲಂಘನೆಯಲ್ಲಿ ಸ್ವಯಂ ಪ್ರೇರಿತವಾಗಿ ಸಮಾಜ ಕಲ್ಯಾಣ, ಇಲಾಖೆ ಶಿಶು ಅಭಿವೃದ್ಧಿ ಇಲಾಖೆ,ಹಿಂದುಳಿದ ಇಲಾಖೆ ಸೇರಿದಂತೆ ನಾನಾ ಇಲಾಖೆ ಅಧಿಕಾರಿಗಳು ದೂರು ಸಲ್ಲಿಸುವಂತೆ ಸೂಚಿಸಿದರು.

ಯಳಂದೂರು ಸಿವಿಲ್ ನ್ಯಾಯಾಧೀಶರಾದ ಎಂ. ಆಕರ್ಷ್ ರವರು ಮಾತನಾಡಿ ಇಂದಿನ ಸಮಾಜದಲ್ಲಿ ಇರುವವರಲ್ಲಿ ಬಹುತೇಕರು ಸು ಸಂಸ್ಕೃತರಿಲ್ಲ, ಮಕ್ಕಳ ಕಳ್ಳ ಸಾಗಣಿಕೆ ತಡೆಯುವ ಕಾಯ್ದೆ ಜಾರಿಗೆ ತಂದಿದ್ದರು ಸಹ ಮಕ್ಕಳ ಕಳ್ಳ ಸಾಗನಿಕೆ ನಡೆಯುತ್ತಿದೆ, ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ತಡೆಯಲು ಪೋಕ್ಸೋ ಕಾಯ್ದೆ ಜಾರಿಗೆ ತರಲಾಗಿದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಬಾಲ್ಯ ವಿವಾಹ ನಡೆಯುತ್ತಿದೆ ಆದ್ದರಿಂದ ಮಕ್ಕಳ ಜಾಗೃತರಾಗಿ ಮೋಸಕ್ಕೆ ಬಲಿಯಾಗಿ ಅನ್ಯಾಯಕ್ಕೆ ಒಳಗಾಗದೆ ಮಕ್ಕಳ ರಕ್ಷಣೆ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಬಿ.ಆರ್. ಸಿ. ನಂಜುಂಡಯ್ಯ ರವರು ಮಾತನಾಡಿ ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ. ಸಮಾಜದಲ್ಲಿ ಶೋಷಣೆ ಹಾಗೂ ದೌರ್ಜನ್ಯಕ್ಕೊಳ್ಳಗಾದ 18 ವರ್ಷದೊಳಗಿನ ಮಕ್ಕಳನ್ನು ಸಮಾಜದ ಮುಖ್ಯ ವಾಹಿನಿಗೆ  ತರುವ ಜೊತೆಗೆ ಉತ್ತಮ ಶಿಕ್ಷಣ ಹಾಗೂ ಮೂಲಸೌಕರ್ಯ ಒದಗಿಸಲು ಎಲ್ಲರೂ ಕೈ ಜೋಡಿಸಬೇಕು, ಪ್ರತಿ ಮಗುವಿಗೆ ಅದರದೇ ಆದ ಹಕ್ಕುಗಳನ್ನು ಒದಗಿಸುವ ಹಾಗೂ ರಕ್ಷಿಸುವ ಗುರಿಯ ಜೊತೆಗೆ ಹಲವಾರು ಯೋಜನೆಗಳನ್ನು ತಂದಿದೆ, ರಾಷ್ಟ್ರ ಹಾಗೂ ವಿಶ್ವಮಟ್ಟದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಕಾರ್ಯಕ್ರಮಗಳು ನಡೆಯುತ್ತಿವೆ, ಆದರೆ ಈ ಕಾನೂನಿನ ಚೌಕಟ್ಟುಗಳ ಹೊರತಾಗಿಯೂ ಭಾರತದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಯಾಗುತ್ತಲೇ ಇದೆ.ಎಲ್ಲಾ ಮಕ್ಕಳು ತಮ್ಮ ಹಕ್ಕುಗಳನ್ನು ಅನುಭವಿಸುತ್ತಿಲ್ಲ ಎನ್ನುವುದಕ್ಕೆ ಪ್ರತಿದಿನ ಒಂದಲ್ಲ ಒಂದು ಮಕ್ಕಳ ಮೇಲಿನ ದೌರ್ಜನ್ಯ ಸುದ್ದಿಗಳು ವರದಿಯಾಗುತ್ತಿರುವುದೇ ಸಾಕ್ಷಿಯಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವೃತ ನಿರೀಕ್ಷಕರಾದ ಶ್ರೀಕಾಂತ್, ಇನ್ಸ್ಪೆಕ್ಟರ್ ಕರಿಬಸಪ್ಪ. ಪ್ರಾಂಶುಪಾಲರಾದ ಮಹೇಶ್, ವಿಜಯ್ ಹನೂರು, ಮಹಿಳಾ ಮೇಲ್ವಿಚಾರಕಿ ಸರಸ್ವತಿ, ತಾಲ್ಲೂಕು ಪೋಷಣ ಸಂಯೋಜಕಿ ಮೌನ ಸಿ.ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕುಮಾರ್, ಸಂಯೋಜಕರಾದ ಅಶೋಕ್, ಶಿಶು ಯೋಜನ ಅಭಿವೃದ್ಧಿ ಇಲಾಖೆಯ ಸಿಬ್ಬಂದಿವರ್ಗದವರು ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.

ವರದಿ ಆರ್ ಉಮೇಶ್ ಮಲಾರಪಾಳ್ಯ