ಗಮನಸೆಳೆದ ಸ್ವಚ್ಚತಾ ದೀಪ,ರಂಗೋಲಿ ಸ್ಪರ್ಧೆ
ಚಾಮರಾಜನಗರ:ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಸ್ವಚ್ಛತಾ ಹಿ ಸೇವಾ-2024ರ ಅಂಗವಾಗಿ ಜಿಲ್ಲಾಮಟ್ಟದ ರಂಗೋಲಿ ಸ್ಪರ್ಧೆ ಹಾಗೂ ಸ್ವಚ್ಛತಾ ದೀಪ ಬೆಳಗಿಸುವ ಕಾರ್ಯಕ್ರಮ ಇಂದು ನಡೆಯಿತು.
ಜಿಲ್ಲಾಧಿಕಾರಿ ಶಿಲ್ಪನಾಗ್ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊನಾ ರೋತ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸ್ವಚ್ಛತಾ ಪ್ರತಿಜ್ಞಾವಿಧಿ ಬೋಧಿಸಿದರು. ಇದೇ ಸಂದರ್ಭದಲ್ಲಿ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನಗಳನ್ನು ವಿತರಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪಿ. ಲಕ್ಷ್ಮೀ, ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇಅರಸ್, ಚಾಮರಾಜನಗರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ಪೂರ್ಣಿಮಾ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಜಿಪಿಎಲ್ಎಫ್ ಸ್ವಸಹಾಯ ಗುಂಪಿನ ಮಹಿಳೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ವರದಿ ಆರ್ ಉಮೇಶ್ ಮಲಾರಪಾಳ್ಯ