ಚಾಮರಾಜನಗರದಲ್ಲಿ ವಕ್ಫ್ ವಿರುದ್ಧ ಬಿಜೆಪಿ ವತಿಯಿಂದ ಪ್ರತಿಭಟನೆ
ಚಾಮರಾಜನಗರ:ನಗರದ ಚಾಮರಾಜೇಶ್ವರ ದೇವಸ್ಥಾನ ಮುಂಭಾಗದಿಂದ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಪಚ್ಚಪ್ಪ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ನೇತೃತ್ವವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ವಹಿಸಿ ಮಾತನಾಡಿದ ಅವರು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಆದೇಶದ ಮೇರೆಗೆ ನಗರದಲ್ಲಿ ಇಂದು ಪ್ರತಿಭಟನೆ ಮಾಡುತ್ತಿದ್ದೇವೆ. ರಾಜ್ಯ ಸರ್ಕಾರ ವಕ್ಫ್ ಹೆಸರಿನಲ್ಲಿ ರೈತರ ಜಮೀನನ್ನು ವಶಪಡಿಸಿಕೊಳ್ಳಬಾರದು. ರೈತರ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಸರ್ಕಾರ ರೈತರ ಮೇಲೆ ತುಂಬಾ ತೊಂದರೆ ನೀಡುತ್ತಿದೆ ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ಹೇಳುತ್ತಿದ್ದಾರೆ ಎಲ್ಲಿ ನುಡಿದಂತೆ ನಡೆದಿದೆ? ಅಲ್ಲದೆ ಗ್ಯಾರಂಟಿ ಯೋಜನೆಗಳನ್ನು ನೀಡಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ವಿದ್ಯುತ್ ಬಿಲ್ ಹೆಚ್ಚಾಗಿ ಜನರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹಮದ್ ರಾಜೀನಾಮೆ ನೀಡಬೇಕು ತಪ್ಪಿದಲ್ಲಿ ಅನಾಹುತಗಳ ಹೊಣೆಗಾರಿಕೆ ಅವರೇ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ನಂತರ ಅಪರ ಜಿಲ್ಲಾಧಿಕಾರಿ ಗೀತಾ ಹುಡೇದ ಅವರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ಅಂತಿಮಗೊಳಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಮಂಗಲ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ಜಿ.ಪಂ.ಮಾಜಿ ಅಧ್ಯಕ್ಷ ಎಂ.ರಾಮಚಂದ್ರು, ಕಾಡ ಮಾಜಿ ಅಧ್ಯಕ್ಷ ನಿಜಗುಣರಾಜು,
ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷ ಜನ ದ್ವನಿ ವೆಂಕಟೇಶ್, ಡಾಕ್ಟರ್ ಎ.ಆರ್.ಬಾಬು,ನಗರಸಭೆ ಅಧ್ಯಕ್ಷ ಸುರೇಶ್ ನಾಯಕ್, ಮೂಡಹಳ್ಳಿ ಮೂರ್ತಿ,ರೇವಣ್ಣ
ಎಸ್ ಟಿ ಮೋರ್ಚಾ ಉಪಾಧ್ಯಕ್ಷ ಬುಲೆಟ್ ಚಂದ್ರು,ಟೌನ್ ಬಿಜೆಪಿ ಕಾರ್ಯದರ್ಶಿ ಎಸ್ ಕಿರಣ್ , ಕಾಡಳ್ಳಿ ಕುಮಾರ್, ಮಂಜುನಾಥ್, ರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.
ವರದಿ ಆರ್ ಉಮೇಶ್ ಮಲಾರಪಾಳ್ಯ