ಕನ್ನಡ ನಾಡು ನುಡಿ ನೆಲ ಜಲ ಭಾಷೆ ಸಂಸ್ಕೃತಿ ಉಳಿಸಿ—ಹರೀಶ್ ಗೌಡ

ದೊಡ್ಡಬಳ್ಳಾಪುರ:ಕನ್ನಡ ನಾಡು ನುಡಿ ನೆಲ ಜಲ ಭಾಷೆ ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸವನ್ನು ಪ್ರತಿಯೊಬ್ಬ ಕನ್ನಡನಾಡಿನ ಪ್ರಜೆಯು ಮಾಡಬೇಕಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.
ನಗರದ ಭಗತ್ ಸಿಂಗ್ ಮೈದಾನದಲ್ಲಿ ಭುವನೇಶ್ವರಿ ಕನ್ನಡ ಸಂಘದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಅವರು ಮಾತನಾಡಿ,ಕರ್ನಾಟಕವನ್ನು 1956 ರಲ್ಲಿ ಏಕೀಕರಣ ಗೋಳಿಸಿ ಕನ್ನಡ ನಾಡುನುಡಿ ಉಳಿಯಲು ಹಲವಾರು ಕನ್ನಡ ಹೋರಾಟಗಾರರು ಮಾರ್ಗದರ್ಶದ ಫಲವಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಕಾರಣ. ನಾಡಿನ ರಾಜಧಾನಿಯಾದ ಬೆಂಗಳೂರಿನಲ್ಲಿ ದೇಶದ ಎಲ್ಲ ರಾಜ್ಯದ ಜನರು ಹಾಗೂ ದೇಶ ವಿದೇಶದ ಜನರು ಬಂದು ವಾಸವಾಗಿದ್ದಾರೆ. ನಾವು ಕನ್ನಡ ನಾಡಿನಲ್ಲಿ ಹುಟ್ಟಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಿದೆ. ಕನ್ನಡ ಭಾಷೆಯನ್ನು ಭಾರತ ರಾಷ್ಟ್ರ ಭಾಷೆಯನ್ನಾಗಿ ಮಾಡುವುದು ಅತಿ ಅವಶ್ಯವಿದೆ ಹಾಗೂ ಎಲ್ಲ ಸಂಘಟನೆಗಳು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಮಾಡಬೇಕಿದೆ ಎಂದು ಹೇಳಿದರು.

ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್ ಮಾತನಾಡಿ, ಕನ್ನಡಿಗರ ಹೋರಾಟದ ಫಲವಾಗಿ ಕರ್ನಾಟಕ ಏಕೀಕರಣ ವಾಯಿತು. ಕರ್ನಾಟಕದಲ್ಲಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಅಗ್ರ ಸ್ಥಾನ ಇರಲೇಬೇಕು. ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಹೊಂದಿರಬೇಕೆಂದು ಕರ್ನಾಟಕದಲ್ಲಿ ಪ್ರತಿಯೊಬ್ಬ ಕನ್ನಡಿಗರೂ ಕನ್ನಡದ ರಾಯಭಾರಿಗಳಾಗಿ ಕನ್ನಡದ ಕೆಲಸ ಮಾಡಬೇಕಾಗಿದೆ. ಕನ್ನಡವನ್ನು ಬಳಸುವ ಮೂಲಕ ಕನ್ನಡ ಉಳಿಸಿ, ಬೆಳೆಸಲು ಮಾತ್ರ ಸಾಧ್ಯ ಎಂಬುದನ್ನು ಎಲ್ಲಾ ಕನ್ನಡಿಗರು ಅರಿಯಬೇಕಾಗಿದೆ. ಕನ್ನಡ ನಾಡಿನ ಇತಿಹಾಸ, ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆಯ ಬಗ್ಗೆ ಅರಿವು ಮೂಡಿಸುವುದು ಕನ್ನಡಿಗರ ಆದ್ಯ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮದ ಅಂಗವಾಗಿ 5 ಕಿ.ಲೋ ಮೀಟರ್ ಮ್ಯಾರಥಾನ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕನ್ನಡ ಜಾಗೃತ ಭವನದ ಅಧ್ಯಕ್ಷ ಕೆ, ವೆಂಕಟೇಶ್. ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ್,ಮುಖಂಡರಾದ ಕೆ.ಪಿ ಜಗನ್ನಾಥ್ ಮ್ಯಾರಥಾನ್ ಕ್ರೀಡಾಪಟುಗಳು
ಸೇರಿದಂತೆ ಇತರರು ಉಪಸ್ಥಿತರಿದ್ದರು
Post Views: 144