ಮಲೆ ಮಹದೇಶ್ವರ ಆಟೋ ಚಾಲಕರ ಸಂಘದಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ

ಚಾಮರಾಜನಗರ : ನಗರದ ಸಂತೇಮರಹಳ್ಳಿ ವೃತ್ತದ ಆವರಣದಲ್ಲಿ ಶ್ರೀ ಮಲೆ ಮಹದೇಶ್ವರ ಆಟೋ ಚಾಲಕರ ಸಂಘದ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಕಿಚ್ಚ ಸುದೀಪ್ ಅಭಿಮಾನಿ ಬಳಗದ ಅಧ್ಯಕ್ಷ ನಾಗೇಂದ್ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕನ್ನಡ ನಾಡು, ನುಡಿ,ಜಲ, ನೆಲಕ್ಕಾಗಿ ಪ್ರತಿಯೊಬ್ಬರು ಶ್ರಮಿಸಬೇಕೆಂದು ಕರೆ ನೀಡಿದರು.
ಕನ್ನಡಿಗರು ಪರಭಾಷೆ ವ್ಯಾಮೋಹವನ್ನು ತ್ಯಜಿಸಿ ಮಾತೃಭಾಷೆ ಕನ್ನಡಕ್ಕೆ ಅಗ್ರಸ್ಥಾನ ನೀಡಿ ಪ್ರತಿಯೊಬ್ಬ ಮಕ್ಕಳಿಗೂ ಕನ್ನಡ ಭಾಷೆಯಲ್ಲಿ ಶಿಕ್ಷಣ ನೀಡಬೇಕೆಂದು ತಿಳಿಸಿದರು.
ಧ್ವಜಾರೋಹಣ ನೆರವೇರಿಸಿದ ನಗರಸಭಾ ಸದಸ್ಯ ಶಿವರಾಜು ಸಿ.ಎಂ. ಮಾತನಾಡಿ ಕನ್ನಡ ಭಾಷೆಗೆ 2 ಸಾವಿರ ವರ್ಷಗಳ ಇತಿಹಾಸವಿದ್ದು, ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ತಿಳಿಸಿದರು.
ಮುಖಂಡ ಕೆಲ್ಲಂಬಳ್ಳಿ ಸೋಮನಾಯಕ ಮಾತನಾಡಿ, ಆಟೋ ಚಾಲಕರು ಕನ್ನಡ ಭಾಷಾ ಉಳಿವಿಗಾಗಿ ಪ್ರಾಮಾಣಿಕ ಕೆಲಸ ಮಾಡುತ್ತಿದ್ದಾರೆ ಅವರಿಗೆ ಸರ್ಕಾರ ಸೌಲಭ್ಯಗಳನ್ನು ಒದಗಿಸಬೇಕು ಎಂದು ತಿಳಿಸಿದರು.

ಇದೆ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಗಾನ ಗಂಧರ್ವ ಸಾಂಸ್ಕೃತಿಕ ಕಲಾವೇದಿಕೆಯ ಅಧ್ಯಕ್ಷ ಹೆಚ್.ಎಂ.ಶಿವಣ್ಣ ಹಾಗೂ ತಂಡದವರಿಂದ ಕನ್ನಡಪರ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಪ್ರಯುಕ್ತ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಸುರೇಶ್, ಪೌರಾಯುಕ್ತ ರಾಮದಾಸ್, ಪ್ರಾದೇಶಿಕ ಸಾರಿಗೆ ಕಚೇರಿ ನಿರೀಕ್ಷಕ ಯೋಗೀಶ್, ಮಲೆ ಮಹದೇಶ್ವರ ಆಟೋ ಚಾಲಕರ ಸಂಘದ ಅಧ್ಯಕ್ಷ ಮಹೇಶ್, ನಗರ ಸಭೆ ಮಾಜಿ ಅಧ್ಯಕ್ಷ ಸುರೇಶ್ ನಾಯಕ, ಹಿರಿಯ ಆಟೋ ಚಾಲಕ ಸಿ.ಪಿ.ನಾಗರಾಜು, ಮುಖಂಡರಾದ ತೆರಕಣಾಂಬಿ ಎಸ್.ಬಸವರಾಜು, ಚಾ‌.ಹ. ಸೋಮು, ಯಜಮಾನ ರಾಜುನಾಯಕ ಸೇರಿದಂತೆ ಆಟೋ ಚಾಲಕರ ಸಂಘದ ಸದಸ್ಯರು ಭಾಗವಹಿಸಿದ್ದರು.

ವರದಿ ಆರ್ ಉಮೇಶ್ ಮಲಾರಪಾಳ್ಯ