*ಬೂದಂಬಳ್ಳಿ ಗ್ರಾಮದಲ್ಲಿ ಶಿವಕುಮಾರ ಸ್ವಾಮೀಜಿ ಪುತ್ತಳಿ ನಿರ್ಮಾಣಕ್ಕೆ ಭೂಮಿ ಪೂಜೆ..*
ಚಾಮರಾಜನಗರ:ತಾಲ್ಲೂಕಿನ ಬೂದಂಬಳ್ಳಿ ಗ್ರಾಮದಲ್ಲಿ ಕಾಯಕಯೋಗಿ ಶಿವಕುಮಾರ ಸ್ವಾಮೀಜಿ ರವರ ಪುತ್ತಳಿ ನಿರ್ಮಾಣಕ್ಕೆ ಗ್ರಾಮಸ್ಥರು ಭೂಮಿ ಪೂಜೆ ನೆರವೇರಿಸಿದರು.
ಗ್ರಾಮದ ಹೃದಯ ಭಾಗದಲ್ಲಿರುವ ಮಾರಮ್ಮ ದೇವಾಲಯದ ಮುಂಭಾಗ ಗ್ರಾಮಸ್ಥರೆಲ್ಲ ಸೇರಿ ಶಿವಕುಮಾರ ಸ್ವಾಮೀಜಿ ರವರ ಪುತ್ತಳಿ ನಿರ್ಮಾಣ ಮಾಡಿ ಮುಂದೆ ಬರುವ ಜೂನ್ 26 ರಂದು ಸಿದ್ದಗಂಗಾ ಸ್ವಾಮೀಜಿ ಗಳಿಂದ ಪುತ್ತಳಿ ಉದ್ಘಾಟನೆ ಮಾಡಿಸಬೇಕೆಂದು ಗ್ರಾಮಸ್ಥರು ತಿಳಿಸಿದ್ದಾರೆ.
ಬುಧವಾರ ಬೆಳಗ್ಗೆ 9.30 ರ ಸಮಯದಲ್ಲಿ ಗ್ರಾಮದ ಯಜಮಾನರು, ಮುಖಂಡರು, ಯುವಕರು ಸೇರಿ ಡಾ. ಶಿವಕುಮಾರ ಸ್ವಾಮೀಜಿ ರವರ ಪುತ್ತಳಿ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ನೆರವೇರಿಸಲಾಯಿತು.
ಈ ವೇಳೆ ಗ್ರಾಮದ ಯಜಮಾನರು .ಮುಖಂಡರು, ಗ್ರಾಮ ಪಂಚಾಯತಿ ಸದಸ್ಯರು ಹಾಜರಿದ್ದರು.
ವರದಿ ಆರ್ ಉಮೇಶ್ ಮಲಾರಪಾಳ್ಯ