ಘಾಟಿ ಸುಬ್ರಮಣ್ಯ ದೇವಾಲಯಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಬೇಟಿ

ದೊಡ್ಡಬಳ್ಳಾಪುರ:ತಾಲೂಕಿನ,ತೂಬಗೆರೆ ಹೋಬಳಿ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಕರ್ನಾಟಕ ಸರ್ಕಾರದ
ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ ಬೇಟಿ ನೀಡಿ ದರ್ಶನ ಪಡೆದರು.

ಘಾಟಿ ದೇವಾಲಯ ಆಡಳಿತ ಮಂಡಳಿಯಿಂದ ವಿಶೇಷ ಪೂಜೆ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದ್ದು, ಬೆಂಗಳೂರಿನಿಂದ ಬಂದ ಅವರನ್ನು ದೇವಾಲಯದ ವತಿಯಿಂದ ಸ್ವಾಗತ ಕೋರಲಾಯಿತು.

ನಂತರ ರಾಷ್ಟೋತ್ಥಾನ ಗೋ ಶಾಲೆ ಬೇಟಿ ನೀಡಿ ಗೋವುಗಳನ್ನ ವೀಕ್ಷಿಸಿದ ಬಳಿಕ ಬೆಂಗಳೂರಿಗೆ ತೆರಳಿದರು.

ಈ ಸಂದರ್ಭದಲ್ಲಿ ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಬಿ. ನಾರಾಯಣಸ್ವಾಮಿ ದೇವಾಲಯದ ಆರ್ಚಕ ಶ್ರೀನಿಧಿ ತೂಬಗೆರೆ ಹೋಬಳಿ ಜಿಡಿಎಸ್ ಅಧ್ಯಕ್ಷ ಜಗನ್ನಾಥ ಚಾರಿ ಸಮಾಜ ಸೇವಕ ಮುತ್ತಣ್ಣ ಹಾಗು ದೇವಾಲಯದ ಸಿಬ್ಬಂದಿ ಹಾಜರಿದ್ದರು