ಬಮುಲ್ ನಿರ್ದೇಶಕರ ಚುನಾವಣೆ.. ಬಿ. ಸಿ. ಆನಂದ್ ನಾಮಪತ್ರ ಸಲ್ಲಿಕೆ

ದೊಡ್ಡಬಳ್ಳಾಪುರ:ಬೆಂಗಳೂರು ಹಾಲು ಒಕ್ಕೂಟ ನಿರ್ದೇಶಕರ ಸ್ಥಾನಕ್ಕೆ ಮೇ 25 ರಂದು ಚುನಾವಣೆ ನಡೆಯಲಿದ್ದು ನಿರ್ದೇಶಕ ಸ್ಥಾನಕ್ಕೆ ಬಿ.ಸಿ ಆನಂದ್ ಕುಮಾರ್ ಶುಕ್ರವಾರ ನಾಮಪತ್ರ ಸಲ್ಲಿಸಿದರು

ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮೇ. 25 ರಂದು ನಡೆಯಲಿರುವ ಬಮೂಲ್ ನಿರ್ದೇಶಕ ಸ್ಥಾನಕ್ಕೆ ಅಧಿಕೃತವಾಗಿ ನಾಮಪತ್ರ ಸಲ್ಲಿಸಲಾಯಿತು, ಕಳೆದ ಐದು ವರ್ಷಗಳಲ್ಲಿ ಹಾಲು ಉತ್ಪಾದಕ ಸಂಘಗಳಿಗೆ ಹಾಗೂ ರೈತರಿಗೆ ನನ್ನ ಪ್ರಾಮಾಣಿಕ ಸೇವೆ ಸಲ್ಲಿಸಿದ್ದೇನೆ, ಇಂದಿನ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ನನ್ನೊಂದಿಗೆ ಪ್ರಾಮಾಣಿಕ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿರುವುದು ವಿಶೇಷವಾಗಿದೆ‌. ನನ್ನ ನಿಷ್ಠೆ ಮತ್ತು ಪ್ರಾಮಾಣಿಕ ಸೇವೆಗೆ ತಾಲ್ಲೂಕಿನ ಹಾಲು ಉತ್ಪಾದಕ ರೈತರು ಆಶೀರ್ವದಿಸಿ ಮತ್ತೊಮ್ಮೆ ಅವರ ಸೇವೆ ಮಾಡಲು ಅವಕಾಶ ಕೊಡುತ್ತಾರೆ ಎಂಬ ನಂಬಿಕೆ ಇದೆ. ಇಂದಿನ ನಾಮಪತ್ರ ಸಲ್ಲಿಕೆಗೆ ನನ್ನೊಂದಿಗೆ ತಾಲ್ಲೂಕಿನ ಹಾಲು ಉತ್ಪಾದಕ ಸಂಘಗಳ ಅಧ್ಯಕ್ಷರುಗಳು,ಹಾಲು ಉತ್ಪಾದಕ ರೈತರು, ಮುಖಂಡರು, ಹಿತೈಷಿಗಳು ಆಗಮಿಸಿ ಆಶೀರ್ವಾದಿಸಿರುವುದು ಅತ್ಯಂತ ಸಂತೋಷ ತಂದಿದೆ, ಬಮೂಲ್ ಚುನಾವಣೆ ಯಾವುದೇ ಪಕ್ಷದ ಚುನಾವಣೆ ಅಲ್ಲ ಇದೊಂದು ರೈತಾಪಿ ವರ್ಗದ ಚುನಾವಣೆ ಬಮೂಲ್ ನಿರ್ದೇಶಕ ಸ್ಥಾನವು ಯಾವುದೇ ಪಕ್ಷ ಬೇದ ವಿಲ್ಲದೆ ರೈತರಿಗೆ ಸಹಕಾರ ನೀಡುವ ಕಾರ್ಯ ಮಾಡುತ್ತದೆ ನನ್ನ ಅಧಿಕಾರದ ಅವಧಿಯಲ್ಲಿ ಯಾವುದೇ ಪಕ್ಷ ವ್ಯಕ್ತಿ ಬೇಧ ಮಾಡದೆ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳದೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದೇನೆ. ಈ ಬಾರಿಯೂ ಕೂಡ ರೈತರು ಆಶೀರ್ವದಿಸುತ್ತಾರೆ ಎಂಬ ದೃಢವಾದ ನಂಬಿಕೆ ಇದೆ ಎಂದರು .
ನಂತರ ಬೆಂಗಳೂರು ಗ್ರಾಮಾಂತರ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ಕುಮಾರ್ ಮಾತನಾಡಿ ಬಮೂಲ್ ನಿರ್ದೇಶಕ ಸ್ಥಾನದ ಅಧಿಕಾರವನ್ನು ಸದ್ಬಳಕೆ ಮಾಡುವ ಮೂಲಕ ತಾಲೂಕಿನ ರೈತರಿಗೆ ಸರ್ಕಾರದ ಯೋಜನೆಗಳನ್ನು ಸಂಪೂರ್ಣವಾಗಿ ತಲುಪಿಸಿ, ಹಾಲು ಉತ್ಪಾದಕರ ಸಮಸ್ಯೆಗಳಿಗೆ ಸದಾ ಸ್ಪಂದಿಸುವ ಮೂಲಕ ಇತಿಹಾಸದಲ್ಲಿ ಮೊದಲ ಬಾರಿಗೆ ಹಾಲು ಉತ್ಪಾದಕರಿಗೆ 4 ರೂ ಹೆಚ್ಚಳದ ರೈತರ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸುವ ಮೂಲಕ ಬಿ.ಸಿ. ಆನಂದ್ ಕುಮಾರ್ ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ, ದೊಡ್ಡಬಳ್ಳಾಪುರ ತಾಲೂಕಿನ ಹಾಲು ಉತ್ಪಾದಕರ ಸಂಘಗಳ ಅಭಿವೃದ್ಧಿಗಾಗಿ ಸದಾ ದುಡಿದಿದ್ದಾರೆ, ಅವರಿಗೆ ನಮ್ಮ ರೈತ ಸಂಘದ ಸಂಪೂರ್ಣ ಬೆಂಬಲ ನೀಡುತ್ತಿದ್ದು, ನಿರ್ದೇಶಕರ ಚುನಾವಣೆಯಲ್ಲಿ ಗೆಲುವು ಸಾಧಿಸಲಿ ಎಂದು ಹಾರೈಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು, ತಾಲೂಕಿನ ಎಲ್ಲಾ ಡೈರಿ ಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು