ಬಮೂಲ್ ನಿರ್ದೇಶಕರ ಸ್ಥಾನದ ಚುನಾವಣೆಗೆ ಹುಸ್ಕೂರ್ ಟಿ ಆನಂದ್ ನಾಮಪತ್ರ ಸಲ್ಲಿಕೆ
ದೊಡ್ಡಬಳ್ಳಾಪುರ:ಮೇ 25 ರಂದು ನಡೆಯಲಿರುವ ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕರ ಚುನಾವಣೆಗೆ ಹುಸ್ಕೂರ್ ಟಿ ಆನಂದ್ ಶನಿವಾರ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆ ವೇಳೆ ಜೆಡಿಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ ಮುನೇಗೌಡ , ಜೆಡಿಎಸ್ ರಾಜ್ಯ ಕಾರ್ಯದರ್ಶಿ ಡಾ. ವಿಜಯಕುಮಾರ್ ಸೇರಿದಂತೆ ಹಲವು ಪ್ರಮುಖರು ಸಾಥ್ ನೀಡಿದ್ದಾರೆ,
ಈ ಹಿಂದೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ” ನಮ್ಮ ಜೆಡಿಎಸ್ ಪಕ್ಷದ ವರಿಷ್ಠರಾದ ಬಿ ಮುನೇಗೌಡರವರ ಆದೇಶಕ್ಕೆ ನಾನು ಕಾಯುತ್ತಿದ್ದೇನೆ, ಸ್ಥಳೀಯವಾಗಿ ಜೆಡಿಎಸ್ ಪಕ್ಷವನ್ನು ಉಳಿಸುವ ನಿಟ್ಟಿನಲ್ಲಿ ನಾನು ಬಮೂಲ್ ನಿರ್ದೇಶಕ ಸ್ಥಾನಕ್ಕೆ ನಾನು ಪ್ರಬಲ ಆಕಾಂಕ್ಷಿಯಾಗಿದ್ದೇನೆ ನನ್ನನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದರೆ ನಾಮಪತ್ರ ಸಲ್ಲಿಸುತ್ತೇನೆ ಎಂದಿದ್ದರು , ” ಅಂತೆಯೇ ಇಂದು ಜೆಡಿಎಸ್ ವರಿಷ್ಠರ ಜೊತೆ ನಾಮಪತ್ರ ಸಲ್ಲಿಸಿರುವುದು ವಿಶೇಷ, ಸ್ಥಳೀಯವಾಗಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಲ್ಲಿ ಒಡಕು ಮೂಡಿದಿಯಾ…??? ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.
ಏನ್ ಡಿ ಎ ಆಕಾಂಕ್ಷಿ ಎಂದು
ಈ ಸಂದರ್ಭದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು, ತಾಲೂಕಿನ ಎಲ್ಲಾ ಡೈರಿಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು .