ವಿವಿಧ ಬೇಡಿಕೆ ಮುಂದಿಟ್ಟು ಪೌರಕಾರ್ಮಿಕರ ಅನಿರ್ಧಿಷ್ಟಾವಧಿ ಮುಷ್ಕರ
,ಕೃಷ್ಣರಾಜಪೇಟೆ: ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪೌರ ನೌಕರರು ನಗರದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದರು.
_ಪಟ್ಟಣದ ಪುರಸಭೆ ಮುಂಭಾಗ ಜಮಾಯಿಸಿದ ನೌಕರರು, ಸರ್ಕಾರ, ಸಚಿವರು, ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು._
_ರಾಜ್ಯದ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಪೌರ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು._
_ಪೌರ ನೌಕರರ ಸಂಘದ ಕಾರಕಾರಣಿ ಸಭೆಯಲ್ಲಿ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ನಿರ್ಣಯಗಳನ್ನು ಕೈಗೊಂಡು ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಮನವಿ ಸಲ್ಲಿಸಿ 45 ದಿನಗಳಾದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಕಾರಣ ಪ್ರತಿಭಟನೆ ಅನಿವಾರ್ಯವಾಗಿತ್ತು ಎಂದು ನೌಕರರು ತಿಳಿಸಿದರು._
_ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕರನಿರ್ವಹಿಸುವ ಪೌರ ನೌಕರರು ಕಸ ಸಂಗ್ರಹ, ವಿಲೇವಾರಿ, ಸ್ವಚ್ಚತೆ, ನೀರು ಪೂರೈಕೆ, ಒಳಚರಂಡಿ ನಿರ್ವಹಣೆ ಕೆಲಸಗಳನ್ನು ಸ್ಥಗಿತಗೊಳಿಸಲಿದ್ದಾರೆ. ಬೇಡಿಕೆಗಳ ಈಡೇರುವರೆವಿಗೂ ಧರಣಿ ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು._
*_ಬೇಡಿಕೆಗಳೇನು ?_*
_•ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ನಗದು ರಹಿತ ಆರೋಗ್ಯಚಿಕಿತ್ಸಾ ಸೌಲಭ್ಯ ಯೋಜನೆಯಾದ ಜ್ಯೋತಿ ಸಂಜೀವಿನಿಯನ್ನು ಪೌರ ನೌಕರರಿಗೂ ವಿಸ್ತರಿಸಬೇಕು. ಸರ್ಕಾರಿ ನೌಕರಿಗೆ ಸಿಗುವ ಎಲ್ಲ ಸೌಲಭ್ಯಗಳನ್ನೂ ನೀಡಬೇಕು._
_•ರಾಜ್ಯದ ನಗರ ಸ್ಥಳೀಯಸಂಸ್ತೆಗಳಲ್ಲಿ ಹೊರಗುತ್ತಿಗೆಯಡಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜುದಾರರ, ವಾಹನ ಚಾಲಕರು, ಲೋಡರ್ಗಳು, ಕ್ಲೀನರ್ಗಳು,ಸ್ವಚ್ಚತಾ ಮೇಲ್ವಿಚಾರಕರು, ಉದ್ಯಾನ ನಿರ್ವಹಣೆಗಾರರು ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು._
_•ದಿನಗೂಲಿ ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಮಾನ ವೇತನ, ಟೈಮ್ ಸ್ಕೆಲ್ ನೌಕರರ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು._
_•ವಾಹನ ಚಾಲಕರು, ನೀರು ಪೂರೈಕೆ ನೌಕರರು ನೇರ ಪಾವತಿ ಪೌರ ಕಾರ್ಮಿಕರನ್ನು ಖಾಯಂಗೊಳಿಸಬೇಕು. ನೌಕರರಿಗೆ ಎಸ್ಎಫ್ಸಿ ಮುಕ್ತ ನಿಧಿಯಿಂದ ವೇತನ ನೀಡಬೇಕು ಎಂದು ಒತ್ತಾಯಿಸಿದರು._
_ಕರ್ನಾಟಕ ರಾಜ್ಯ ಫೌರ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಚಲುವರಾಜು, ಗೌರವಾಧ್ಯಕ್ಷ .ಪಿ.ಚನ್ನಯ್ಯ.ಕೆ.ಎಂ.ಚಂದ್ರು ಉಪಾಧ್ಯಕ್ಷರು,ಪಳನಿ ಸಂಘಟನೆ ಕಾರ್ಯದರ್ಶಿ, ಖಂಜಾಚಿ ಕೆ.ಎಂ.ಮಂಜು,ಕಂದಾಯ ಅಧಿಕಾರಿಗಳಾದ ರವಿ ಕುಮಾರ್, ಹಿರಿಯ ಆರೋಗ್ಯಾಧಿಕಾರಿ ಆಶೋಕ ಕುಮಾರ್, ಫೌರ ಸೇವಾ ನೌಕರರ ಸಂಘ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು._
*_ವರದಿ ಸಾಯಿಕುಮಾರ್. ಎನ್. ಕೆ,_*