ಕಾರಹಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಶ್ರೀಮತಿ ನಾಗರತ್ನ ಜಯರಾಮ್ ಆಯ್ಕೆ
ದೇವನಹಳ್ಳಿ: ಕಾರಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾದ ಶ್ರೀಮತಿ ನಾಗರತ್ನ ಜಯರಾಮ್ ಅವರು, ಸ್ಥಳೀಯ ಮುಖಂಡರೊಂದಿಗೆ ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್. ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಶುಭಾಶಯ ವಿನಿಮಯ ಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು ನೂತನ ಅಧ್ಯಕ್ಷರಿಗೆ ಸಲಹೆ ನೀಡಿದರು. ಗ್ರಾಮಗಳಲ್ಲಿ ಜನರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಅವರು ತಿಳಿಸಿದರು.
ಈ ಭೇಟಿ ಸಂದರ್ಭದಲ್ಲಿ ಮುಖಂಡರಾದ ಜಯರಾಮ್, ವೆಂಕಟೇಶ್, ಮಂಜುನಾಥ್, ರಮೇಶ್, ಆನಂದ್ ಗೌಡ, ನರಸಿಂಹಮೂರ್ತಿ, ಮುನೇಗೌಡ, ರವಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.