ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ‚ ಗ್ರಾಮೀಣ ಕೈಗಾರಿಕೆ‚ ಮೀನುಗಾರಿಕೆ ಇಲಾಖೆ‚ ಅಲೆಮಾರಿ ಅರೆ ಅಲೆಮಾರಿ ನಿಗಮದ ವತಿಯಿಂದ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ

ಸಂತೇಮರಹಳ್ಳಿ: ಎ ಪಿ ಎಂ ಸಿ ಆವರಣದಲ್ಲಿ ನಡೆದ ವಿವಿಧ ಅಭಿವೃದ್ಧಿ ನಿಗಮಗಳಿಂದ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ ಆರ್ ಕೃಷ್ಣಮೂರ್ತಿ ಅವರು ಮಾತನಾಡಿ ಮಹಿಳೆಯರು ತಮ್ಮ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಮಾಡಲಾಗಿದೆ
ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಕೆಲವರು ಟೀಕೆ ಮಾಡುತ್ತಾರೆ. ಯಾವುದೇ ಪಕ್ಷದವರಾದರೂ ಕೂಡ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯುತ್ತಿದ್ದಾರೆ
ಅಲ್ಲದೇ ಕೊಳ್ಳೇಗಾಲ ಕ್ಷೇತ್ರದ ನೀರಾವರಿ ಯೋಜನೆಗೆ 500 ಕೋಟಿಗೂ ಹೆಚ್ಚಿನ ಅನುದಾನವನ್ನು ಸರ್ಕಾರ ನೀಡಿದೆ. ಹಲವು ವರ್ಷಗಳಿಂದಲೂ ನೀರಾವರಿ ಯೋಜನೆಗೆ ಅನುದಾನ ಬಂದಿರಲಿಲ್ಲ ನಮ್ಮ ತಂದೆಯವರಾದ ಶ್ರೀ ಬಿ. ರಾಚಯ್ಯ ಅವರು ಸಚಿವರಾಗಿದ್ದಾಗ ಸುವರ್ಣಾವತಿ ಜಲಾಶಯ ನಿರ್ಮಿಸಿ ರೈತರಿಗೆ ಅನುಕೂಲ ಕಲ್ಪಿಸಿದ್ದರು.

ಯಳಂದೂರು ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ 35 ಕೋಟಿ ಅನುದಾನ ಬಿಡುಗಡೆಯಾಗಿದ್ದು ಈಗಾಗಲೇ ಕಾಮಗಾರಿ ಆರಂಭವಾಗಿದೆ. ಕೊಳ್ಳೇಗಾಲದಲ್ಲಿ ಮತ್ತೊಂದು ಜಿಲ್ಲಾಸ್ಪತ್ರೆ ಮಂಜೂರಾಗಿದೆ. ಕ್ಷೇತ್ರದಲ್ಲಿ ರೇಷ್ಮೆ ಕಾರ್ಖಾನೆಗಳ ಪುನಶ್ವೇತನ‚ ಮುಡಿಗುಂಡ ಸೇತುವೆ ನಿರ್ಮಾಣ‚ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡುಗಡೆಯಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಎಲ್ಲಾ ‌ಜಾತಿ ಭವನಗಳ ನಿರ್ಮಾಣಕ್ಕೆ ಕ್ರಮವಹಿಸಲಾಗಿದ್ದು ಈಗಾಗಲೇ ಅಂಬೇಡ್ಕರ್‚ ವಾಲ್ಮೀಕಿ ಮತ್ತು ಬಸವ ಭವನಗಳ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ಮುಂದಿನ ದಿನಗಳಲ್ಲೂ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು . ಚಾಮುಲ್ ನಾಮ ನಿರ್ದೇಶಿತ ಸದಸ್ಯರಾದ ಕಮರವಾಡಿ ರೇವಣ್ಣ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ರಾಜು. ಸಮಾಜ ಕಲ್ಯಾಣ ಇಲಾಖೆಯ ಕೇಶವಮೂರ್ತಿ. ಗ್ರಾಮೀಣ ಕೈಗಾರಿಕಾ ಇಲಾಖೆಯ ಪುಷ್ಪಲತಾ.ಸೇರಿದಂತೆ ಫಲಾನುಭವಿಗಳು ಉಪಸ್ಥಿತರಿದ್ದರು.

ವರದಿ:ಆರ್ ಉಮೇಶ್ ಮಲಾರಪಾಳ್ಯ