ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ವಿಜಯಪುರ: ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಅನಾರೋಗ್ಯಕ್ಕೆ ತುತ್ತಾದಾಗ ವೈದ್ಯಕೀಯ ಚಿಕಿತ್ಸೆ ಪಡೆಯುವುದಕ್ಕಿಂತ ಅನಾರೋಗ್ಯ ಬರುವ ಮೊದಲೇ ಎಚ್ಚೆತ್ತುಕೊಂಡು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಪುರಸಭೆ ಸದಸ್ಯ ವಿ.ನಂದಕುಮಾರ್ ತಿಳಿಸಿದರು.
ಪಟ್ಟಣದ ದುರ್ಗಾತಾಯಿ ಕಾಲೋನಿಯಲ್ಲಿರುವ ಸಮುದಾಯ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನದೀಪ ಕಾರ್ಯಕ್ರಮದಡಿಯಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ ಉದ್ಘಾಟನೆ ಮಾಡಿ ಅವರು ಮಾತನಾಡಿದರು
ನಾಗರಿಕರು ತಮ್ಮ ಆರೋಗ್ಯವನ್ನು ತಪಾಸಣೆ ಮಾಡಿಸಿಕೊಂಡು ಕಾಲಕಾಲಕ್ಕೆ ವೈದ್ಯರು ಕೊಟ್ಟ ಸಲಹೆಯನ್ನು ಪಡೆಯಬೇಕು. ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿರಲಿ, ವೈದ್ಯರು ಕೊಡುವಂತಹ ಸಲಹೆ ಮತ್ತು ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ್ ಹಡಪದ್ ಮಾತನಾಡಿ, ಇಂದಿನ ದಿನಗಳಲ್ಲಿ ಹೃದಯಾಘಾತ ಹೆಚ್ಚಾಗಿ ಸಂಭವಿಸುತ್ತಿವೆ. ಮೊಬೈಲ್ ಸಾಧನದಿಂದ ಕಣ್ಣಿಗೆ ತುಂಬಾ ತೊಂದರೆಯಾಗುತ್ತಿದೆ. ಮೊಬೈಲ್ ಸಾಧನದಿಂದ ಉಪಯುಕ್ತವಾದ ವಿಷಯಗಳು ತಿಳಿಯುತ್ತದೆ. ನಮಗೆ ಮೊಬೈಲ್ ಸಾಧನವನ್ನು ಎಷ್ಟು ಬೇಕೋ ಅಷ್ಟು ಉಪಯೋಗಿಸಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಕರೆ ನೀಡಿದರು.
ಬೆಂಗಳೂರಿನ ಮಹಾವೀರ ಜೈನ್ ಆಸ್ಪತ್ರೆ ಮತ್ತು ದೃಷ್ಟಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ನಡೆಸಿಕೊಟ್ಟರು.
ಪುರಸಭಾ ಸದಸ್ಯ ಬೈರೇಗೌಡ, ಶ್ಯಾಮಲ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ವಿಜಯಲಕ್ಷ್ಮಿ ಮಂಜುಳಾ, ಆಶಾ, ವಿ.ವಿಶ್ವನಾಥ್ ಮುಂತಾದವರು ಹಾಜರಿದ್ದರು.
12.ವಿಜೆಪಿ.04: ವಿಜಯಪುರ ಪಟ್ಟಣದ ದುರ್ಗಾತಾಯಿ ಕಾಲೋನಿಯಲ್ಲಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸ್ಥಳೀಯರು ವೈದ್ಯರನ್ನು ಅಭಿನಂದಿಸಿದರು.